Sat,Apr27,2024
ಕನ್ನಡ / English

ರಾಜ್ಯದಲ್ಲಿ ಅಕ್ಟೋಬರ್ 1- 4ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ | ಜನತಾ ನ್ಯೂಸ್

30 Sep 2021
1773

ಬೆಂಗಳೂರು : ರಾಜ್ಯದಲ್ಲಿ ಅ.1ರಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವ್ಯಾಪಕವಾದ ಮಳೆಯಾಗಲಿದೆ. ಅಕ್ಟೋಬರ್ 1 ರಿಂದ 4 ರವರೆಗೆ ತಮಿಳುನಾಡು, ಕೇರಳ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂಬುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತದ ಪೂರ್ವ ಹಾಗೂ ಪಶ್ಚಿಮ ಕರಾವಳಿಯಲ್ಲಿ ಗುಲಾಬ್ ಚಂಡಮಾರುತದಿಂದಾಗಿ ಭಾರೀ ಮಳೆಯಾಗುತ್ತಿದ್ದು, ಈ ಬೆನ್ನಲ್ಲೇ ಹವಾಮಾನ ಇಲಾಖೆ ಮುಂಗಾರು ಅಂತ್ಯವಾಗುವ ಮುನ್ಸೂಚನೆ ನೀಡಿದೆ.

ಗುಜರಾತ್ ಕರಾವಳಿಯ ಈಶಾನ್ಯ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪ್ರಭಾವದಲ್ಲಿ ಸೌರಾಷ್ಟ್ರ ಹಾಗೂ ಕಚ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ, ಮರಾಠವಾಡ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ಗುಲಾಬ್​ ಚಂಡ ಮಾರುತ ಹಾಗೂ ಅದರಿಂದ ಮರುಹುಟ್ಟು ಪಡೆದ ಶಾಹಿನ್​ ಚಂಡ ಮಾರುತದ ಪ್ರಭಾವ ಅರಬ್ಬಿ ಸಮುದ್ರದ ಮೇಲೂ ಆಗುತ್ತಿದೆ. ಪರಿಣಾಮ ಕರ್ನಾಟಕದ ಹಲವೆಡೆ ಮೂರು ದಿನ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅ.1ರಿಂದ ಅ.3ರ ವರೆಗೆ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅ.1 ಮತ್ತು 2ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಅ.1ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇರಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

RELATED TOPICS:
English summary :Bangalore

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...