Mon,Dec15,2025
ಕನ್ನಡ / English

ಲೈಂಗಿಕ ಸಂಪರ್ಕಕ್ಕೆ ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ! | ಜನತಾ ನ್ಯೂಸ್

04 Oct 2021

ಯಾದಗಿರಿ : ಲೈಂಗಿಕ ಸಂಪರ್ಕಕ್ಕೆ ವಿರೋಧಿಸಿದ್ದಕ್ಕೆ ವ್ಯಕ್ತಿಯೊಬ್ಬ ಗೃಹಿಣಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಾರಣ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾಳೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದಲ್ಲಿ ಮಧ್ಯರಾತ್ರಿ ವಿವಾಹಿತ ಮಹಿಳೆ ಬಾಲಮ್ಮ ತೀವ್ರ ಗಾಯಗೊಂಡಿದ್ದು, ಸೋಮವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗ್ರಾಮದ ಬಾಲಮ್ಮ ಎನ್ನುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಅದೇ ಗ್ರಾಮದ ಗಂಗಪ್ಪ ಎನ್ನುವ ಯುವಕ ಯತ್ನಿಸಿದ್ದಾನೆ. ಟ್ರಾಕ್ಟರ್ ಚಾಲಕನಾಗಿರುವ ಗಂಗಪ್ಪ, ನಿನ್ನೆ ತಡರಾತ್ರಿ ಬಾಲಮ್ಮಳ ಮನೆಗೆ ನುಗ್ಗಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಗ್ರಾಮದ ಆರೋಪಿ ಗಂಗಪ್ಪ ಹಲವು ದಿನಗಳಿಂದ ಅಕ್ರಮ ಸಂಬಂಧಕ್ಕಾಗಿ ಮಹಿಳೆ ಮೇಲೆ ಹಿಂದೆ ಬಿದ್ದಿದ್ದ. ಆದರೆ ಈತನ ಮಾತಿಗೆ ಒಪ್ಪದ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ತಡರಾತ್ರಿ ಗಂಡ ಇಲ್ಲದ ಸಮಯದಲ್ಲಿ ಮತ್ತೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಆಕೆಯ ಮೇಲೆ ಪೈಶಾಚಿಕ ಕೃತ್ಯ ಮೆರೆದಿದ್ದಾನೆ.

ಹೊರಗಡೆ ನಿಲ್ಲಿಸಿದ್ದ ಬೈಕ್ ನಿಂದ ಪೆಟ್ರೋಲ್ ತಂದು ಮಹಿಳೆಯ ಮೇಲೆ ಹಾಕಿ ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಸುರಪುರ ತಾಲೂಕು ಆಸ್ಪತ್ರೆಯಲ್ಲಿ, ಚಿಕಿತ್ಸೆ ನೀಡಿದ ಬಳಿಕ ಮಹಿಳೆಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಮಹಿಳೆಗೆ ಚಿಕಿತ್ಸೆ ಫಲಕಾರುಯಾಗದೆ ಕಲಬುರಗಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಸುರಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

RELATED TOPICS:
English summary :Yadagiri

 ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
ಆಸ್ಟ್ರೇಲಿಯಾ ಬೋಂಡಿ ಬೀಚ್‌ನಲ್ಲಿ ಭಯೋತ್ಪಾದಕ ದಾಳಿಗೆ ಕನಿಷ್ಟ 12 ಸಾವು
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ನ್ಯೂಸ್ MORE NEWS...