Sat,Apr27,2024
ಕನ್ನಡ / English

ದಸರಾ ಆಚರಣೆಗೆ ನಿಯಮಗಳ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ! | ಜನತಾ ನ್ಯೂಸ್

05 Oct 2021
2546

ಮೈಸೂರು : ಮೈಸೂರು ದಸರಾ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಸರಳವಾಗಿ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದ್ದು, ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅ.15ರಂದು ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಜನರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಿ ಅನುಮತಿ ನೀಡಿದೆ.

ದಸರಾ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 7 ರಿಂದ 15ವರೆಗೆ ದಸರಾ ನಡೆಯಲಿದ್ದು, ಈಗಾಗಲೇ ಭರದಿಂದ ಸಿದ್ದತೆಗಳು ನಡೆಯುತ್ತಿವೆ. ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಸಮಾರಂಭಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

ಇನ್ನು ಕಳೆದ ಬಾರಿಯಂತೆಯೆ ಈ ಬಾರಿ ಸಹ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

- ಮೈಸೂರು ದಸರಾ ಹಬ್ಬ ಆಚರಣೆಗೆ ಕೋವಿಡ್ ನಿಯಮಗಳನ್ನು ಅನುಸರಿಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ಅ.7ರಂದು ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಸಮಾರಂಭಕ್ಕೆ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

- ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಜಂಬೂಸವಾರಿಗೆ ಕೇವಲ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.

- ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವವರಿಗೆ ಒಂದು ಡೋಸ್ ಲಸಿಕೆ ಪಡೆದಿರುವುದು ಕಡ್ಡಾಯಗೊಳಿಸಲಾಗಿದೆ. ಇಲ್ಲವಾದಲ್ಲಿ ಆರ್‌ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕಿದೆ.

- ಸಾಮಾಜಿಕ ಅಂತರವಿಲ್ಲದೆ ಯಾವುದೇ ಕಾರ್ಯಕ್ರಮ ನಡೆಯುತ್ತಿರುವುದನ್ನ ಕಂಡು ಬಂದಲ್ಲಿ ಅದನ್ನು ನಿಷೇಧಿಸಲಾಗುತ್ತದೆ.

- ಸರ್ಕಾರ ಹೊರಡಿಸಿರುವ ಕೊರೊನಾ ನಿಯಮಗಳನ್ನು ತಪ್ಪದೇ ಪಾಲನೆ ಮಾಡಬೇಕು.

- ಯಾವುದೇ ರೀತಿಯ ಕಾನೂನು ಭಂಗ ಮಾಡದೇ ಶಾಂತಿಯಿಂದ ಹಬ್ಬ ಆಚರಣೆ ಮಾಡಬೇಕು.

- ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿಸಾಮಾಜಿಕ ಅಂತರ ಮತ್ತು ಮಾಸ್ಕ್ ಹಾಗು ಸ್ಯಾನಿಟೈಸರ್ ಕಡ್ಡಾಯ.

- ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕೇವಲ 2 ಗಂಟೆ ಅವಕಾಶ

- ಈ ಕಾರ್ಯಕ್ರಮಗಳಿಗೆ 500 ಜನರಿಗಿಂತ ಹೆಚ್ಚಿನ ಜನರು ಸೇರಬಾರದು.

- ದೀಪಾಲಂಕಾರ ನೋಡಲು ಸಂಜೆ ಸಂಜೆ 7 ರಿಂದ 9 ರವರೆಗೆ ಮಾತ್ರ ಅವಕಾಶ

- ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ.

- ಪೊಲೀಸ್ , ಕಲಾವಿದರು ಮತ್ತು ವಾದ್ಯ ವೃಂದವರಿಗೆ ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯ

RELATED TOPICS:
English summary :Mysuru Dasara Guidelines

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...