Mon,May20,2024
ಕನ್ನಡ / English

ಹಲ್ಲಿಗೆ ಕ್ಲಿಪ್​ ಹಾಕಿಸಲು ಆಸ್ಪತ್ರೆಗೆ ಹೋದ ಯುವಕ ಸಾವು! | ಜನತಾ ನ್ಯೂಸ್

05 Oct 2021
3829

ಕಲಬುರಗಿ : ಹಲ್ಲುಗಳಿಗೆ ಕ್ಲಿಪ್​ ಹಾಕಿಸಿಕೊಳ್ಳಲೆಂದು ಆಸ್ಪತ್ರೆಗೆ ಬಂದ ಯುವಕನೊಬ್ಬ ಮೃತಪಟ್ಟ ಘಟನೆ ಕಲಬುರಗಿ ನಗರದಲ್ಲಿ ಸಂಭವಿಸಿದೆ.

ಕಲಬುರಗಿಯ ಆನಂದ ನಗರದ ನಿವಾಸಿ ಶಶಾಂಕ್(18) ಮೃತ ದುರ್ದೈವಿ. ಈತ ಹಲ್ಲಿಗೆ ಕ್ಲಿಪ್ ಹಾಕಿಸಿಕೊಳ್ಳಲು ಕಲಬುರಗಿ ನಗರದ ಚಿರಾಯು ಆಸ್ಪತ್ರೆಗೆ ಹೋದಾಗ ಆತನಿಗೆ ವೈದ್ಯರು ಆಪರೇಷನ್ ಮೊದಲು ಅರವಳಿಕೆ ಚುಚ್ಚುಮದ್ದು ನೀಡಿದ್ದರು. ಪರಿಣಾಮ ಯುವಕ ಪ್ರಜ್ಞಾಹೀನನಾಗಿದ್ದು, ಆತ ಕಳೆದ ಮೂರು ದಿನಗಳಿಂದ ಕೋಮಾಕ್ಕೆ ಜಾರಿದ್ದನು.

ಮೂರು ದಿನವಾದರೂ ಪ್ರಜ್ಞೆ ಬರಲೇ ಇಲ್ಲ. ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ.

ವೈದ್ಯರ ನಿರ್ಲಕ್ಷ್ಯದಿಂದಲೇ ಶಶಾಂಕ್​ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆ ಮುಂದೆ ಮೃತನ ಸಂಬಂಧಿಕರು ಮತ್ತು ಸ್ನೇಹಿತರು ಪ್ರತಿಭಟನೆ ನಡೆಸಿದರು.

ಪೋಲಿಸರು ಮಧ್ಯ ಪ್ರವೇಶಿಸಿ ಮೃತ ಯುವಕನ ಶರೀರವನ್ನು ಶವ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.

RELATED TOPICS:
English summary :Kalburgi

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...