Sat,Apr27,2024
ಕನ್ನಡ / English

ಲಖಿಂಪುರ್ ಹಿಂಸಾಚಾರ : ಎಫ್ಐಆರ್ ದಾಖಲು, ಪ್ರಿಯಾಂಕಾ ಗಾಂಧಿಯನ್ನು ಅಧಿಕೃತವಾಗಿ ಬಂಧಿಸಿದ ಪೊಲೀಸರು | ಜನತಾ ನ್ಯೂಸ್

05 Oct 2021
3070

ಲಕ್ನೋ : ಭಾರತೀಯ ದಂಡ ಸಂಹಿತೆಯ ಸೆಕ್ಷನ್ 144 ಅನ್ನು ಉಲ್ಲಂಘಿಸಿದ್ದಕ್ಕಾಗಿ, ಶಾಂತಿಗೆ ಭಂಗ ತಂದಿದ್ದಕ್ಕಾಗಿ ಮತ್ತು ಇತರ ಸೆಕ್ಷನ್ ಗಳ ಅಡಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯನ್ನು ಔಪಚಾರಿಕವಾಗಿ ಬಂಧಿಸಲಾಗಿದ್ದು, ಪ್ರಿಯಾಂಕ ಗಾಂಧಿಯೊಂದಿಗೆ ಇನ್ನೂ 10 ಕಾಂಗ್ರೆಸ್ಸಿಗರು ಈಗ ಸಿಆರ್ ಪಿಸಿಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಅಧಿಕೃತವಾಗಿ ಬಂಧನಕ್ಕೊಳಗಾಗಿದ್ದಾರೆ, ಎಂದು ಮೂಲಗಳು ತಿಳಿಸಿವೆ.

ಚುನಾವಣೆ ಹೊಸ್ತಿಲಲ್ಲಿರುವ ಉತ್ತರ ಪ್ರದೇಶದಲ್ಲಿ, ಭಾನುವಾರ ರಾತ್ರಿ ಬಂಧನಕ್ಕೊಳಗಾದಾಗ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟುಂಬಗಳನ್ನು ಭೇಟಿಯಾಗಲು ಕಾಂಗ್ರೆಸ್ ನಾಯಕಿ ಹೋಗುತ್ತಿದ್ದರು. ಹಿಂಸಾಚಾರ ಪೀಡಿತ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ರೈತರನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಗಾಂಧಿಯನ್ನು ಬಂಧಿಸಲಾಗಿತ್ತು.

ಹಿಂಸಾಚಾರ ಲಖಿಂಪುರ್ ಗೆ ತೆರಳುತ್ತಿದ್ದ ಪ್ರಿಯಾಂಕ ಗಾಂಧಿ ಅವರನ್ನು ಒಂದು ದಿನಕ್ಕೂ ಹೆಚ್ಚಿನ ಸಮಯ ಪಿಎಸಿ ಅತಿಥಿ ಗೃಹದಲ್ಲಿ ಇರಿಸಿದ್ದ ಬಳಿಕ ಅವರನ್ನು ಈಗ ಸೀತಾಪುರ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ಈಗ ವಿವಿಧ ಸಿಆರ್ ಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಿಯಾಂಕ ಗಾಂಧಿ ಅವರನ್ನು ಹಾಗೂ ಇತರ ಕಾಂಗ್ರೆಸ್ ನಾಯಕರಾದ ದೀಪೇಂದ್ರ ಸಿಂಗ್ ಹೂಡ, ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು, ಪಕ್ಷದ ಎಂಎಲ್ ಸಿ ದೀಪಕ್ ಸಿಂಗ್, ಸಂದೀಪ್ ರಾಜ್ ಕುಮಾರ್, ನರೇಂದ್ರ ಶೇಖಾವತ್, ಯೋಗೇಂದ್ರ ಹರಿಕಾಂತ್, ಧೀರಜ್ ಗುರ್ಜರ್ ಹಾಗೂ ಅಮಿತ್ ಅವರನ್ನು ಬಂಧಿಸಲಾಗಿದೆ.

ಆಕೆಯನ್ನು ಶೀಘ್ರವೇ ಜಿಲ್ಲಾ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು, ಎಂದು ಮೂಲಗಳು ತಿಳಿಸಿವೆ. ಆದರೆ ಜಿಲ್ಲಾಡಳಿತದಿಂದ ಇನ್ನೂ ಏನನ್ನೂ ತಿಳಿಸಿಲ್ಲ ಎಂದು ಆಕೆಯ ಕಚೇರಿ ಹೇಳಿದೆ.

ಶಾಂತಿ ಕದಡಿದ ಪ್ರಿಯಾಂಕಾ ಗಾಂಧಿ ವಾದ್ರಾ, ದೀಪೇಂದ್ರ ಹೂಡಾ ಮತ್ತು ಅಜಯ್ ಕುಮಾರ್ ಲಲ್ಲು ಸೇರಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ, ಎಂದು ಹರಗಾಂವ್ ಪೊಲೀಸ್ ಠಾಣೆಯ ಎಸ್.ಎಚ್.ಒ ತಿಳಿಸಿದ್ದಾರೆ.

RELATED TOPICS:
English summary :Police arrested Priyanka Gandhi

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...