ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಆತ್ಮೀಯವಾಗಿ ಸ್ವಾಗತಿಸಿದ ಸಿಎಂ! | ಜನತಾ ನ್ಯೂಸ್
ಬೆಂಗಳೂರು : ಮೂರು ದಿನಗಳ ಕರ್ನಾಟಕ ಪ್ರವಾಸ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಗರಕ್ಕೆ ಆಗಮಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರಪತಿಗಳಿಗೆ ಶಾಲು ಹೊದಿಸಿ ಸರ್ಕಾರದ ಪರವಾಗಿ ಸನ್ಮಾನಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ರಾಷ್ಟ್ರಪತಿಗಳು ಇಂದು ಬೆಂಗಳೂರಿನಲ್ಲಿಯೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಿಗ್ಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಲ್ಲಿನ ಬಿಳಿಗಿರಿ ರಂಗನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲ್ಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಸುಮಾರು 450 ಬೆಡ್ ಸಾಮರ್ಥ್ಯವಿರುವ ನೂತನ ವೈದ್ಯಕೀಯ ಜಿಲ್ಲಾಸ್ಪತ್ರೆಯ ಉದ್ಘಾಟನೆ ಮಾಡಲಿದ್ದಾರೆ.
ಅ.8 ರಂದು ರಾಷ್ಟ್ರಪತಿ ಗಳು ಶೃಂಗೇರಿ ಶ್ರೀ ಶಾರದಾ ಪೀಠಕ್ಕೆ ಭೇಟಿ ನೀಡಲಿದ್ದಾರೆ. ಅ. 9ರಂದು ಬೆಳಗಿನ ಉಪಾಹಾರ ಸ್ವೀಕರಿಸಿ ಮಂಗಳೂರು ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ನಿರ್ಗಮಿಸಲಿದ್ದಾರೆ.