ಬಿಎಸ್​ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ನೀರಾವರಿಯಲ್ಲಿ 2000 ಕೋಟಿ ಅವ್ಯವಹಾರ? | ಜನತಾ ನ್ಯೂಸ್

07 Oct 2021
457

ಬೆಂಗಳೂರು : ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರ ಆಪ್ತ ಉಮೇಶ್​ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಐಟಿ ದಾಳಿಯಾಗಿದೆ. ರಾಜ್ಯದ ವಿವಿಧೆಡೆ ಬರೊಬ್ಬರಿ 50 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಲ್ಲಿಯೂ ಮಾಜಿ ಮುಖ್ಯಮಂತ್ರಿ ಆಪ್ತ ಸಹಾಯಕ ಉಮೇಶ್ ಮನೆ ಮೇಲೆ ದಾಳಿ ನಡೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಶೋಧ ನಡೆಸಲಾಗುತ್ತಿದೆ. ಜಲ ಸಂಪನ್ಮೂಲ ಇಲಾಖೆಯ ಬೃಹತ್‌ ನೀರಾವರಿ ಯೋಜನೆಗಳ ಕಾಮಗಾರಿ ನಿರ್ವಹಿಸುತ್ತಿರುವ ಹಲವು ಗುತ್ತಿಗೆದಾರರ ಮೇಲೂ ಐ.ಟಿ ದಾಳಿ ನಡೆದಿದೆ. ಕೃಷ್ಣಾ ಭಾಗ್ಯ ಜಲ ನಿಗಮದ ಕಾಮಗಾರಿಗಳ ಗುತ್ತಿಗೆಯಲ್ಲಿ ಅವ್ಯವಹಾರ ನಡೆಸಿರುವ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭಿಸಿದೆ.

ಮೂಲತಃ ಶಿವಮೊಗ್ಗದ ಆಯನೂರಿನ ಉಮೇಶ್, 2007-08ನೇ ಸಾಲಿನ ನೇಮಕಾತಿಯಲ್ಲಿ ಬಿಎಂಟಿಸಿ ಉದ್ಯೋಗಿಯಾಗಿ ಸೇರಿದ ಉಮೇಶ್​, ಟ್ರೈನಿಯಾಗಿ ಸಾರಿಗೆ ನಿಗಮದಲ್ಲಿ ಸರ್ಕಾರಿ ಕೆಲಸ ಮಾಡುತ್ತಿದ್ದ, ಅವರು ಪೂರ್ಣ ಪ್ರಮಾಣದಲ್ಲಿ ಬಿಎಂಟಿಸಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸಿಲ್ಲ. ನೇಮಕವಾಗಿದ್ದು ಮಾತ್ರ ಬಿಎಂಟಿಸಿ ನಿರ್ವಾಹಕ ಕಂ ಚಾಲಕರಾಗಿ ಎಂಬ ಮಾಹಿತಿಯಿದೆ. ಅದು ಬೆಂಗಳೂರಿನ ಯಲಹಂಕದ ಪುಟ್ಟೇನಹಳ್ಳಿಯ ಬಿಎಂಟಿಸಿ ಡಿಪೋದಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿದ್ದರು ಉಮೇಶ್.

2012ರಿಂದಲೂ ಯಡಿಯೂರಪ್ಪ ಅವರ ಆಪ್ತ ಸಹಾಯಕನಾಗಿದ್ದರು. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಅವರ ಅತ್ಯಾಪ್ತರಲ್ಲಿ ಉಮೇಶ್‌ ಒಬ್ಬರು. ಯಡಿಯೂರಪ್ಪ ಅವರ ಪುತ್ರರಾದ ಸಂಸದ ರಾಘವೇಂದ್ರ ಹಾಗೂ ಬಿವೈ ವಿಜಯೇಂದ್ರ ಅವರಿಗೂ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿಯಿದೆ. ಹೀಗಾಗಿ ಅವರ ನಿವಾಸದ ಮೇಲೆ ಐಟಿ ದಾಳಿ ನಡೆದಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಆಸ್ತಿಯನ್ನು ಉಮೇಶ್ ಮಾಡಿದ್ದಾರೆ ಎಂಬ ಆರೋಪವಿದೆ. ಜೊತೆಗೆ ಬೆಂಗಳೂರಿನ ವಿಜಯನಗರದಲ್ಲಿಯೂ 60*120 ವಿಸ್ತೀರ್ಣದಲ್ಲಿ ಒಂದು ಭವ್ಯ ಮನೆಯನ್ನು ಉಮೇಶ್ ನಿರ್ಮಾಣ ಮಾಡಿಸುತ್ತಿದ್ದಾರೆ ಎಂಬ ಮಾಹಿತಿಯಿದೆ.

ಜೊತೆಗೆ ಕಳೆದ ಎರಡು ವರ್ಷಗಳಲ್ಲಿ ಉಮೇಶ್ ಆದಾಯದಲ್ಲಿ ದಿಢೀರ್ ಏರಿಕೆಯಾಗಿದ್ದು, ಅದೇ ಹಿನ್ನೆಲೆಯಲ್ಲಿ ಐಟಿ ದಾಳಿ ನಡೆದಿದೆ ಎನ್ನಲಾಗುತ್ತಿದೆ. ನೀರಾವರಿ ನಿಗಮದಲ್ಲಿ ನಡೆದಿದ್ದ ಟೆಂಡರ್ ಬಗ್ಗೆಯೂ ಬಿಜೆಪಿಯಲ್ಲಿ ಅಪಸ್ವರಗಳು ಕೇಳಿ ಬಂದಿದ್ದವು. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಐಟಿ ದಾಳಿ ತೀವ್ರ ಕುತೂಹಲ ಮೂಡಿಸಿದೆ.

ಗುತ್ತಿಗೆದಾರರಿಗೆ ಸೇರಿದ ಸ್ಥಳಗಳಿಂದಲೂ ಬೃಹತ್‌ ಪ್ರಮಾಣದ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ. 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಮುಂದುವರಿದಿದೆ.

ರಾಜಾಜಿನಗರದ ರಾಮಮಂದಿರ ಪ್ರದೇಶದಲ್ಲಿರುವ ಉಮೇಶ್ ಮನೆ, ನಾಗಸಂದ್ರದಲ್ಲಿ ಉಮೇಶ್ ಹೊಂದಿರುವ ಧವಳಗಿರಿ ಹೆಸರಿನ ಮನೆ, ಮಾನ್ಯತಾ ಟೆಕ್ ಪಾರ್ಕ್‌ನಲ್ಲಿರುವ ಲೆಕ್ಕ ಪರಿಶೋಧಕಿಯೊಬ್ಬರ ಮನೆ, ಗುತ್ತಿಗೆದಾರರಾದ ಡಿ.ವೈ. ಉಪ್ಪಾರ್, ಎ.ವೈ. ಕಟ್ಟೀಮನಿ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಯುತ್ತಿದೆ.

RELATED TOPICS:
English summary :BSYediyurappa

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...