Sat,Apr27,2024
ಕನ್ನಡ / English

ಸಂಸದ ತೇಜಸ್ವಿ ಸೂರ್ಯ ಪತ್ರ : ದುರ್ಗಾ ಪೂಜೆ ಆಚರಣೆ ನಿಯಮದಲ್ಲಿ ಸಡಿಲಿಕೆ ಮಾಡಿದ ಬಿಬಿಎಂಪಿ . | ಜನತಾ ನ್ಯೂಸ್

07 Oct 2021
2083

ಬೆಂಗಳೂರು : ದುರ್ಗಾ ಪೂಜೆಯಲ್ಲಿ ಸಾಕಷ್ಟು ನಿರ್ಬಂಧಗಳನ್ನು ಹೇರಿದ್ದ ಬಿಬಿಎಂಪಿ ಸಂಸದ ತೇಜಸ್ವಿ ಸೂರ್ಯ ಅವರ ಖಡಕ್ ಪತ್ರದ ಬಳಿಕ ನಿಯಮಗಳಲ್ಲಿ ಸಡಿಲಿಕೆಗೆ ಮುಂದಾಗಿದೆ. ಸದರಿ ವಿಷಯಕ್ಕೆ ಸಂಬಂಧಿಸಿದಂತೆ ಇಂದು ದುರ್ಗಾ ಪೂಜಾ ಸಂಘದ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸದರಿ ಆದೇಶದಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಲಾಗಿದ್ದು, ಅವುಗಳು ಈ ಕೆಳಗಿನಂತಿವೆ‌.

• ಸಾರ್ವಜನಿಕ ಸ್ಥಳಗಳಲ್ಲಿ ದುರ್ಗಾ ಮೂರ್ತಿಗಳ 4 ಅಡಿ ಎತ್ತರ ನಿರ್ಬಂಧವನ್ನು ತೆಗಿಯಲಾಗಿದೆ.

• ಪುಷ್ಪಾಂಜಲಿ ಮತ್ತು ಸಂಧಿ ಪೂಜೆ ವೇಳೆ ಕೋವಿಡ್ ನಿಯಮಗಳನ್ನು ಅನುಸರಿಸಿಕೊಂಡು 50 ಜನರಿಗೆ ಹಂತ-ಹಂತವಾಗಿ ಬರಲು ಅವಕಾಶ ಕಲ್ಪಿಸಿದ್ದು, ಹಂತ-ಹಂತವಾಗಿ ಬರುವ ಒಟ್ಟು ಸಂಖ್ಯೆಗೆ ಯಾವುದೇ ನಿರ್ಬಂಧವಿಲ್ಲ.

• ಅವಶ್ಯಕತೆ ಅನುಸಾರ, ಒಂದು ವಾರ್ಡಿಗೆ ಅನೇಕ ಮೂರ್ತಿಗಳನ್ನು ಇಡಲು ಅವಕಾಶ ಕಲ್ಪಿಸಿದ್ದು, ವಲಯ ಜಂಟಿ ಆಯುಕ್ತರು ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು.

• ಪ್ರಾರ್ಥನಾ ಸಮಯದಲ್ಲಿ ಸಾಂಪ್ರದಾಯಿಕ ವಾದ್ಯಗಳನ್ನು(ಡಾಕ್ ಮತ್ತು ಡೋಲ್) ಅನುಮತಿಸಲಾಗಿದೆ.

• ಇನ್ನುಳಿದ ವಿಷಯಗಳ ಬಗ್ಗೆ ಸರ್ಕಾರ ಹೊರಡಿಸಿರುವ ಆದೇಶದಂತೆ ಷರತ್ತುಗಳನ್ನು ಪಾಲಿಸತಕ್ಕದ್ದು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿವಾಗಿ ದುರ್ಗಾ ಪೂಜೆ ಆಚರಣೆಯ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ರವರು ದಿನಾಂಕ:05-10-2021 ರಂದು ಮಂಗಳವಾರ ಆದೇಶ ಹೊರಡಿಸಿದ್ದರು.

ಈ ಆದೇಶಗಳ ಕುರಿತು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಂಸದ ತೇಜಸ್ವಿ ಸೂರ್ಯ ಅವರು, ಆಡಳಿತವು ಕೇವಲ ಹಿಂದೂ ಆಚರಣೆಯಲ್ಲಿ ಮಾತ್ರ ಕಠಿಣ ಮತ್ತು ಅನಿಯಂತ್ರಿತ ನಿಯಮಾವಳಿ ಹೇರುತ್ತದೆ ಮತ್ತು ಬೇರೆ ನಂಬಿಕೆಗಳ ಆಚರಣೆ ವಿಷಯಗಳಲ್ಲಿ ಕಣ್ಣು ಕುರುಡಾಗಿ ಪರಿವರ್ತಿತವಾಗುತ್ತದೆ, ಎಂದು ಗಂಭೀರವಾಗಿ ಆರೋಪಿಸಿದ್ದರು. ಅಲ್ಲದೇ, ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ತಾರತಮ್ಯ, ಅನಿಯಂತ್ರಿತ ಮತ್ತು ತರ್ಕಬದ್ಧವಲ್ಲದ ದುರ್ಗಾ ಪೂಜಾ ನಿಯಮಗಳನ್ನು ಮರುಪರಿಶೀಲಿಸುವಂತೆ, ಆಗ್ರಹಿಸಿದ್ದರು.

RELATED TOPICS:
English summary :MP Tejasvi Surya letter : Relaxation in Durga pooje rules by BBMP

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...