ಮೋಜು ಮಸ್ತಿಗಾಗಿ ಪ್ರೇಮಿಗಳಿಬ್ಬರು ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ! | ಜನತಾ ನ್ಯೂಸ್

08 Oct 2021
510

ಬೆಂಗಳೂರು : ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆ ಕಳ್ಳತನ ಮಾಡಿ ಮೋಜು ಮಸ್ತಿ ಮಾಡುತ್ತಿದ್ದ ಇಬ್ಬರು ಪ್ರೇಮಿಗಳನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಪ್ರೇಮಿಗಳನ್ನು ವಿನಯ್ (32) ಹಾಗೂ ಪ್ರೇಯಸಿ ಕೀರ್ತನಾ(25) ಎಂದು ಗುರುತಿಸಲಾಗಿದೆ. ಕೊಲೆ ಯತ್ನ, ಹಲ್ಲೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ರೌಡಿಶೀಟರ್ ಆಗಿದ್ದ ವಿನಯ್ ಬಾಗಲಗುಂಟೆಯಲ್ಲಿ ವಾಸ ಮಾಡುತ್ತಿದ್ದ. ಕಳೆದ ಮೂರು ವರ್ಷಗಳಿಂದ ಕೀರ್ತನಾ ಹಾಗು ವಿನಯ್ ಪ್ರೇಮಿಗಳಾಗಿದ್ದಾರೆ.

ಇವರಿಬ್ಬರೂ ಮೋಜು - ಮಸ್ತಿ ಮಾಡಬೇಕೆಂಬ ತುಡಿತ ಹೊಂದಿದ್ದರು. ಆದರೆ, ಕೈಯಲ್ಲಿ ಹಣವಿರಲಿಲ್ಲ. ಮತ್ತೊಂದೆಡೆ ಲಾಂಗ್ ಡ್ರೈವ್​​​​ಗೆ ಕರೆದುಕೊಂಡು ಹೋಗಿ ಉಡುಗೊರೆ ಕೊಡಿಸುವಂತೆ ಕೀರ್ತನಾ ಪೀಡಿಸುತ್ತಿದ್ದಳಂತೆ. ಹೀಗಾಗಿ ವಿನಯ್ ತನ್ನ ಜೊತೆ ಕಳ್ಳತನಕ್ಕೆ ಪ್ರಿಯತಮೆ ಕೀರ್ತನಾಳು ಸಾಥ್ ನೀಡುತಿದ್ದಳು.

ಹೀಗಾಗಿ, ವಿನಯ್​ ಹಾಗು ಪ್ರೇಯಸಿ ಕೀರ್ತನಾ ಬೈಕ್​ನಲ್ಲಿ ಏರಿಯಾ ರೌಂಡ್ಸ್ ಹಾಕಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗಳ್ಳತನ ಮಾಡುತ್ತಿದ್ದರು. ಮನೆ ಖಾಲಿ ಇದೆ ಎಂಬ ಫಲಕವೇ ಇವರ ಬಂಡವಾಳವಾಗಿತ್ತು. ಮನೆಯ ಬಗ್ಗೆ ವಿಚಾರಿಸಲು ಮಾಲೀಕರ ಮನೆಗೆ ತೆರಳಿ ಅವರ ಕಣ್ತಪ್ಪಿಸಿ ಖತರ್ನಾಕ್​ ಪ್ರೇಮಿಗಳು ಕಳ್ಳತನ ಮಾಡುತ್ತಿದ್ದರು.

ಕಳೆದ ಅ.4 ರಂದು ಮಾರುತಿನಗರದ ಕುಲಶೇಖರ್ ಎನ್ನುವವರ ಮನೆಗೆ ವಿನಯ್ ಹಾಗೂ ಕೀರ್ತನಾ ಬಾಡಿಗೆ ಮನೆ ಕೇಳುವ ನೆಪದಲ್ಲಿ ತೆರಳಿದ್ದರು. ನಾವಿಬ್ಬರು ದಂಪತಿ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಮನೆ ಮಾಲೀಕರ ಜೊತೆ ವಿನಯ್ ಮಾತಿಗಿಳಿದಿದ್ದ.

ವಿನಯ್, ಕುಲಶೇಖರ್ ಜೊತೆ ಮಾತಾಡುತ್ತಿದ್ದರೆ ಇತ್ತ ಕೀರ್ತನಾ ಮಾಲೀಕರ ಮನೆಯಲ್ಲಿದ್ದ 1 ಮೊಬೈಲ್, 1 ಲ್ಯಾಪ್​ಟಾಪ್​ ಹಾಗೂ 15 ಸಾವಿರ ಹಣ ಕಳ್ಳತನ ಮಾಡಿ ಪರಾರಿಯಾಗಿದ್ದರು.‌ನಂತರ ಮನೆ ಮಾಲೀಕರು ಲ್ಯಾಪ್​ಟಾಪ್​ ಕಾಣಿಸದಿರುವುದನ್ನು ಕಂಡು ಅನುಮಾನಗೊಂಡಿದ್ದಾರೆ.

ನಂತರ ಮನೆಯ ಕೋಣೆಗೆ ಅಳವಡಿಸಿದ್ದ ಸಿಸಿಟಿವಿಯನ್ನು ಪರಿಶೀಲಿಸಿದ್ದಾರೆ. ಆಗ ಮನೆ ಬಾಡಿಗೆಗೆ ಬಂದವರು ಎಸಗಿದ ಕೃತ್ಯ ಬಯಲಿಗೆ ಬಂದಿದೆ. ಈ ಸಂಬಂಧ ಮನೆ ಮಾಲೀಕ ಕುಲಶೇಖರ್ ಕೊಟ್ಟ ದೂರಿನನ್ವಯ ಸದ್ಯ ಇಬ್ಬರು ಆರೋಪಿಗಳನ್ನು​ ಚಂದ್ರ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

RELATED TOPICS:
English summary :Bangalore

ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
2 ಪ್ರಕರಣಗಳಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ಮಂಜೂರು | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#
ಶಾಲೆಗೆಂದು ಹೇಳಿ ಈಜಲು ಹೋದ ಬಾಲಕ ಕೆರೆ ಪಾಲು! | ಜನತಾ ನ್ಯೂ&#

ನ್ಯೂಸ್ MORE NEWS...