Sat,Apr20,2024
ಕನ್ನಡ / English

ನಾವು ಲಖಿಂಪುರ್ ಖೇರಿ ಘಟನೆಯನ್ನು ಚುನಾವಣೆಯ ದೃಷ್ಟಿಯಿಂದಲ್ಲ, ಮಾನವೀಯ ದೃಷ್ಟಿಕೋನದಿಂದ ನೋಡಬೇಕು - ಜೆಪಿ ನಡ್ಡಾ | ಜನತಾ ನ್ಯೂಸ್

09 Oct 2021
2001

ನವದೆಹಲಿ : ನಾವು ಲಖಿಂಪುರ್ ಖೇರಿ ಘಟನೆಯನ್ನು ಚುನಾವಣೆಯ ದೃಷ್ಟಿಯಿಂದ ನೋಡಬಾರದು, ಆದರೆ ಅದನ್ನು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಇದು ದುರದೃಷ್ಟಕರ ಘಟನೆ, ಮತ್ತು ಬಿಜೆಪಿ ಅಧ್ಯಕ್ಷನಾಗಿ, ಕಾನೂನು ತನ್ನ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ನಾನು ಹೇಳುತ್ತೇನೆ" ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಅವರು ಇಂಡಿಯಾ ಟುಡೇ ಕಾನ್ಕ್ಲೇವ್ 2021ರಲ್ಲಿ ಮಾತನಾಡುತ್ತಿದ್ದರು.

"ಕಾನೂನನ್ನು ಮೀರಿ ಯಾರೂ ಇಲ್ಲ; ತನಿಖೆಯಲ್ಲಿ ಯಾವುದೇ ಕಲ್ಲನ್ನೂ ತಿರುಗಿಸದೇ ಬಿಡುವುದಿಲ್ಲ", ಎಂದು ಅವರು ಹೇಳಿದರು.

ಲಖಿಂಪುರ್ ಖೇರಿ ಹಿಂಸಾಚಾರದ ಬಗ್ಗೆ ನಡೆಯುತ್ತಿರುವ ವಿವಾದ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ಹಾಗೂ ವಾಗ್ದಾಳಿಗಳ ಬೆನ್ನಲ್ಲೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ತನಿಖೆಯಲ್ಲಿ ಯಾವುದೇ ಕಲ್ಲನ್ನೂ ತಿರುಗಿಸದೇ ಬಿಡುವುದಿಲ್ಲ, ಎಂದು ಹೇಳಿದ್ದಾರೆ.

"ಒಂದು ಎಸ್‌ಐಟಿಯನ್ನು ರಚಿಸಲಾಗಿದೆ, ಮತ್ತು ಸಾಧ್ಯವಾದಷ್ಟು ಉತ್ತಮವಾದ ತನಿಖೆ ನಡೆಯುತ್ತದೆ. ತನಿಖೆಯಲ್ಲಿ ಯಾವುದೇ ತಪ್ಪನ್ನು ನಾವು ಬಿಡುವುದಿಲ್ಲ" ಎಂದು ಜೆಪಿ ನಡ್ಡಾ ಹೇಳಿದರು.

"ಅಭಿವೃದ್ಧಿಗೊಳ್ಳುತ್ತಿರುವ ಈ ಹೊಸ ಪ್ರತಿಭಟನೆಯ ವಿಧಾನವು ಸಹ ಚಿಂತಾಜನಕವಾಗಿದೆ. ದಾರಿಯಲ್ಲಿ ಕಾರಿನ ಮೇಲೆ ದಾಳಿ ಮಾಡಿದಾಗ ಬಹಳಷ್ಟು ಘಟನೆಗಳು ನಡೆಯುತ್ತವೆ. ನಾನು ಈ ಘಟನೆಯ ಬಗ್ಗೆ ಮಾತನಾಡುತ್ತಿಲ್ಲ, ಆದರೆ ಸಾಮಾನ್ಯವಾಗಿ ಹೇಳುತ್ತಿದ್ದೇನೆ. ಸಾರ್ವಜನಿಕ ನಾಯಕರ ಮನೆಗಳ ಮೇಲೆ ಘೇರಾವ್ ಹಾಕಿದ ರೀತಿ. ನಾವು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ವ್ಯವಸ್ಥೆಯನ್ನು ಎಷ್ಟು ದೂರ ತೆಗೆದುಕೊಳ್ಳುತ್ತೇವೆ, ಎಂದು ಕೂಡ ನಾವು ಯೋಚಿಸಬೇಕು. ಕಾನೂನನ್ನು ಯಾರ ಕೈಗೂ ತೆಗೆದುಕೊಳ್ಳಲು ಅವಕಾಶವಿಲ್ಲ, ಮತ್ತು ನ್ಯಾಯವನ್ನು ನೀಡಲಾಗುವುದು, ಎಂದು ಜೆಪಿ ನಡ್ಡಾ ಹೇಳಿದರು.

ರೈತರ ಹೋರಾಟದ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಅವರು, ರೈತರ ಪರವಾಗಿ ಪ್ರಧಾನಿ ಮೋದಿ ಸರ್ಕಾರ ಮಾಡಿದ್ದಷ್ಟು ಸಾಧನೆ ಇಲ್ಲಿಯ ವರೆಗೆ ಯಾರು ಮಾಡಿಲ್ಲ. ಫಸಲ್ ಬೀಮಾ ಯೋಜನೆ, ರೈತರಿಗೆ ಪೆನ್ಶನ್, ಕಿಸಾನ್ ಸಮ್ಮಾನ್ ಯೋಜನೆ, ದುಪ್ಪಟ್ಟುಗೊಂಡ ಎಂ.ಎಸ್.ಪಿ, ಕಡಿಮೆ ದರದಲ್ಲಿ ರಸಗೊಬ್ಬರ ಸೇರಿದಂತೆ ಅನೇಕ ಯೋಜನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ, ರೈತ ಮುಖಂಡರ ಹೆಸರಿನಲ್ಲಿ ರಾಜಕೀಯ ಪ್ರೇರಿತ ಹೋರಾಟ ಎಲ್ಲಾ ಸಮಸ್ಯೆಗೆ ಕಾರಣ ಎಂದಿದ್ದಾರೆ.

RELATED TOPICS:
English summary :We should not see it in election point of view, we should see it in humanity point of view - JP Nadda

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...