ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು, ಡಿ.ಕೆ. ಶಿವಕುಮಾರ್ ಹೇಳಿದ ಸುಳ್ಳುಗಳು ಅಸಹ್ಯ ಹುಟ್ಟಿಸುತ್ತಿವೆ! | ಜನತಾ ನ್ಯೂಸ್

09 Oct 2021
529

ಬೆಂಗಳೂರು : ಸುಳ್ಳು ಹೇಳುವುದಕ್ಕೂ ಮಿತಿ ಇರಬೇಕು. ವ್ಯಕ್ತಿ ಇಲ್ಲವಾದ ಮೇಲೆ ಅವರ ವಿಚಾರದಲ್ಲಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವುದು ರಾಜಕೀಯವಾಗಿ, ವೈಯಕ್ತಿಕವಾಗಿ ಅನೈತಿಕ ಎಂಬುವುದು ನನ್ನ ಅಭಿಪ್ರಾಯ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಪ್ಪಟ ಸುಳ್ಳು ಹೇಳುವ ಮೂಲಕ ದಿವಂಗತ ನಾಯಕ ಎಂಸಿ ಮನಗೂಳಿ ಅವರಿಗೆ ಅಪಚಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ದಿವಂಗತ ನಾಯಕ ಎಂಸಿ ಮನಗೂಳಿ ನಿಧನರಾಗುವುದಕ್ಕೆ 15 ದಿನ ಮೊದಲು ತಮ್ಮ ಪುತ್ರ ಅಶೋಕ್ ಅವರನ್ನು ಕರೆದುಕೊಂಡು ನಮ್ಮ ಮನೆಗೆ ಬಂದಿದ್ದರು. ನನಗೆ ವಯಸ್ಸಾಗಿದೆ. ಆರೋಗ್ಯ ಸರಿ ಇಲ್ಲ. ಎಷ್ಟು ದಿನ ಇರುತ್ತೇನೋ ಗೊತ್ತಿಲ್ಲ. ಅಶೋಕನನ್ನು ನಿಮ್ಮ ಹಾಗೂ ಸಿದ್ದರಾಮಯ್ಯ ಮಡಿಲಿಗೆ ಹಾಕುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುಳ್ಳುಗಳನ್ನು ಸೃಷ್ಟಿ ಮಾಡುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎನ್ನುವುದಕ್ಕೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಬೇರೆ ಇಲ್ಲ. ಸತ್ಯ ಏನೆಂದರೆ, ಕೊವಿಡ್ ಸೋಂಕಿತರಾಗಿದ್ದ ಮನಗೂಳಿ ಅವರನ್ನು ಬೆಂಗಳೂರಿನ ಅಪೊಲೋ ಆಸ್ಪತ್ರೆಗೆ ನಾವೇ ಸೇರಿಸಿದ್ದೆವು. 19 ದಿನಗಳ ಕಾಲ ಅವರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ.

ಜನವರಿ 9 ರಂದು ಮನಗೂಳಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿ, ಜನವರಿ 28 ರಂದು ಅಲ್ಲಿಯೇ ನಿಧನರಾದರು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮನಗೂಳಿ ಅವರನ್ನು ನಾನೂ ಸೇರಿ ಅವರ ಮಕ್ಕಳೂ ನೋಡಲಾಗಲಿಲ್ಲ. ಅದಕ್ಕೂ ಮೊದಲು ಅವರು ಒಂದೂವರೆ ತಿಂಗಳು ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಹಾಗಾದರೆ, ಮನಗೂಳಿ ಅವರು ಡಿಕೆ ಶಿವಕುಮಾರ್ ಮನೆಗೆ ಹೋಗಿದ್ದು ಯಾವಾಗ? ಮಕ್ಕಳನ್ನು ಮಡಿಲಿಗೆ ಹಾಕಿಕೊಳ್ಳಿ ಎಂದಿದ್ದು? ಅವರ ಹಸಿಸುಳ್ಳುಗಳು ಅಸಹ್ಯ ಹುಟ್ಟಿಸುವಂತಿವೆ. ನಮ್ಮ ಪಕ್ಷದ ಅಭ್ಯರ್ಥಿಯಾಗಬೇಕಿದ್ದ ಅಶೋಕ್ ಮನಗೂಳಿ ಅವರನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಲ್ಲದೆ, ಈಗ ಸುಳ್ಳುಗಳ ಸರಮಾಲೆ ಹಣೆಯುತ್ತಾ ಜನರಿಗೆ ಟೋಪಿ ಹಾಕಲು ಹೊರಟಿದ್ದಾರೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸಿಂಧಗಿ ಜನತೆಗೆ ಯಾಮಾರಿಸುವ ಪ್ರಯತ್ನ ಬೇಡ. ಅಭ್ಯರ್ಥಿಗೆ ದಿಕ್ಕಿಲ್ಲದ ಕಾಂಗ್ರೆಸ್ ಪಕ್ಷದ ನಾಯಕರು ಈಗ ದಿಕ್ಕು ತೋಚದ ಸ್ಥಿತಿಯಲ್ಲಿದ್ದಾರೆ. ನಮ್ಮ ಪಕ್ಷ ಹಾಗೂ ಮಾನ್ಯ ದೇವೇಗೌಡರ ಬಗ್ಗೆ ಅಚಲ ನಿಷ್ಠೆ ಹೊಂದಿದ್ದ ದಿವಂಗತ ಮನಗೂಳಿ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಪ್ರಯತ್ನ ಬೇಡ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

RELATED TOPICS:
English summary :H D Kumaraswamy

ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ನವೋದಯ ವಿದ್ಯಾಲಯದಲ್ಲಿ 31 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆಗೈದು ಪ್ರಿಯಕರ ಆತ್ಮಹತ್ಯೆ! | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ಈ ಹಿಂದೆ ಶ್ರೀರಾಮನನ್ನು ನಿಂದಿಸುತ್ತಿದ್ದವರು, ಚುನಾವಣೆಯ ಕಾರಣ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ - ಯೋಗಿ | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ತವರಿಗೆ ಬಂದಿದ್ದ ತಂಗಿಯನ್ನೇ ಮಾರಕಾಸ್ತ್ರದಿಂದ ಹೊಡೆದು ಸಾಯಿಸಿದ ಅಣ್ಣ! | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ನಾಪತ್ತೆಯಾಗಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರನ್ನು ಹುಡುಕಿ ಕೆಲಸಕ್ಕೆ ಹಚ್ಚಿ: ಸಿಎಂಗೆ ಸಿದ್ದರಾಮಯ್ಯ ಆಗ್ರಹ | ಜನತಾ ನ್ಯೂ&#
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ದೀಪಾವಳಿಯಂದು ಕಡ್ಡಾಯವಾಗಿ ಗೋಮಾತೆಗೆ ಪೂಜೆ ಸಲ್ಲಿಸಬೇಕು ಸರ್ಕಾರದಿಂದ ಆದೇಶ! | ಜನತಾ ನ್
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಡಿಕೆ ಶಿವಕುಮಾರ್ ಸಿಎಂ ಕನಸಿಗೆ ಎಳ್ಳು ನೀರು ಬಿಡಲು ಸಿದ್ದರಾಮಯ್ಯ ಸಿದ್ದರಾಗಿದ್ದಾರೆ: ಬಿಜೆಪಿ ವ್ಯಂಗ್ಯ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಸಿದ್ದರಾಮಯ್ಯ ಕಂಡರೆ ಕುರುಬರಿಗೆ ಇಂಗ್ಲಿಷ್ ಫಿಲಂ ನೋಡಿದ ಹಾಗೆ: ಎಚ್. ವಿಶ್ವನಾಥ್ | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಹೃದಯ ವಿದ್ರಾವಕ ಘಟನೆ: ಮಕ್ಕಳಿಗೂ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ಬೆಂಗಳೂರಿನಲ್ಲಿ ನಿಷೇಧಿತ 1 ಸಾವಿರ ಮುಖಬೆಲೆಯ, 5 ಕೋಟಿಯಷ್ಟು ಕಲರ್ ಜೆರಾಕ್ಸ್ ನೋಟುಗಳ ವಶ..! | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ನನ್ನ ಸಾವಿಗೆ ಕೆಟ್ಟ ಶಿಕ್ಷಣ ವ್ಯವಸ್ಥೆಯೇ ಕಾರಣ, ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#
ಕೋವಿಡ್-19 ನಿಂದ ರಾಜ್ಯಾದ್ಯಂತ 10 ಸಾವು, 290 ಹೊಸ ಪ್ರಕರಣ : ಬೆಂಗಳೂರಿನಲ್ಲಿ 137 | ಜನತಾ ನ್ಯೂ&#

ನ್ಯೂಸ್ MORE NEWS...