Thu,Apr25,2024
ಕನ್ನಡ / English

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ | ಜನತಾ ನ್ಯೂಸ್

10 Oct 2021
2844

ಬೆಂಗಳೂರು : ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣುತ್ತದೆ ಎಂದು ಹೆಚ್​ಡಿಕೆ ಟೀಕಿಸಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣುತ್ತೆ. ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೆ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಅವರು ನಿಂದಿಸುತ್ತಿದ್ದಾರೆ ಎಂದು ಹರಿಹಾಯ್ದರು.

ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಮತದಾರರೇ ಅವರಿಗೆ ತಕ್ಕ ಉತ್ತರ ನೀಡಲಿದ್ದಾರೆ. ಈಗ ಎಂ.ಸಿ.ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ಸಿದ್ದಕಲೆ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ಸಿದ್ಧಹಸ್ತರು ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ

RELATED TOPICS:
English summary :H D Kumaraswamy

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...