ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ! | ಜನತಾ ನ್ಯೂಸ್
ಶಿವಮೊಗ್ಗ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಹತ್ತು ವರ್ಷ ಜೈಲು ಹಾಗೂ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.
ಮನ್ಸೂರ್ ಎಂಬಾತ 2019ರಲ್ಲಿ 16 ವರ್ಷದ ಅಪ್ರಾಪ್ತೆಯನ್ನ ಟಿವಿ ನೋಡುವ ನೆಪದಲ್ಲಿ ಮನಗೆ ಕರೆದು ಆಕೆ ಮೇಲೆ ಅತ್ಯಾಚಾರ ಎಸಗಿದ್ದ. ಈ ವಿಷಯವನ್ನ ಯಾರಿಗೂ ಹೇಳದಂತೆ ಬಾಲಕಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ ಬೀಡಿಯಿಂದ ಆಕೆಯ ಬಲಗೈ ಸುಟ್ಟಿದ್ದ. ಈ ಬಗ್ಗೆ 2019ರಲ್ಲಿ ಶಿವಮೊಗ್ಗ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ ಪಿಐ ಅಭಯಪ್ರಕಾಶ್ ಸೋಮನಾಳ್ ಅವರು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ದಯಾನಂದ್ ಅವರು ಆರೋಪಿ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.