Thu,Apr25,2024
ಕನ್ನಡ / English

ಆಧುನಿಕ ಮಹಿಳೆಯರು ಮಕ್ಕಳನ್ನು ಬಯಸುವುದಿಲ್ಲ: ಸುಧಾಕರ್ ಹೇಳಿಕೆಗೆ ವ್ಯಾಪಕ ಆಕ್ರೋಶ | ಜನತಾ ನ್ಯೂಸ್

11 Oct 2021
1564

ಬೆಂಗಳೂರು : ಆಧುನಿಕ ಮಹಿಳೆಯರು ಮಕ್ಕಳನ್ನು ಬಯಸುವುದಿಲ್ಲ ಎಂದು ಹೇಳಿಕೆ ನೀಡಿದ್ದ ಆರೋಗ್ಯ ಸಚಿವ ಡಾ.ಕೆ .ಸುಧಾಕರ್ ವಿರುದ್ಧ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

"ದೇಶದಲ್ಲಿನ ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಿದ್ದಾರೆ. ವಿವಾಹವಾದರೂ ಮಕ್ಕಳಿಗೆ ಜನ್ಮ ನೀಡಲು ಇಷ್ಟ ಪಡುತ್ತಿಲ್ಲ. ಬದಲಾಗಿ ಬಾಡಿಗೆ ತಾಯ್ತನವನ್ನು ಅನುಸರಿಸುತ್ತಿದ್ದಾರೆ" ಎಂದು ರವಿವಾರ ಹೊಸೂರು ರಸ್ತೆಯಲ್ಲಿರುವ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಆಯೋಜಿಸಿದ್ದ 25ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದರು.

ನಾನು ಇಂದು ಈ ಮಾತನ್ನು ಹೇಳಲು ಬೇಸರ ಪಡುತ್ತೇನೆ, ನನ್ನನ್ನು ಕ್ಷಮಿಸಿ ಎಂದು ಮಹಿಳೆಯರ ಬಗ್ಗೆ ಈ ಹೇಳಿಕೆಯನ್ನು ನೀಡಿದ್ದರು. ಇಂದಿನ ಆಧುನಿಕ ಮಹಿಳೆಯರು ಹೆಚ್ಚಾಗಿ ಈ ರೀತಿಯ ಮನೋಭಾವವನ್ನು ಹೊಂದಿದ್ದಾರೆ. ಇದು ಪಾಶ್ಚತ್ಯ ಸಂಸ್ಕೃತಿಯ ಪಾಲನೆ. ಈ ಬದಲಾವಣೆ ಒಳ್ಳೆಯದಲ್ಲ. ಹಾಗೆಯೇ ಈಗಿನ ಜನರು ತಮ್ಮ ಪೋಷಕರು ತಮ್ಮ ಜೊತೆ ಜೀವಿಸಬೇಕು ಎಂಬುವುದನ್ನು ಕೂಡಾ ಒಪ್ಪುವುದಿಲ್ಲ ಎಂದು ಹೇಳಿದ್ದರು.

ಆಧುನಿಕ ಮಹಿಳೆಯರು ಒಬ್ಬರೇ ಜೀವನ ನಡೆಸಲು ಬಯಸುತ್ತಾರೆ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಕ್ರೋಶ ಹೊರ ಹಾಕಿದ್ದಾರೆ.

ಈ ವಿಚಾರದ ಬಗ್ಗೆ ಟ್ವೀಟ್ ಮಾಡಿರುವ ಶಾಸಕಿ ಅಂಜಲಿ ನಿಂಬಾಳ್ಕರ್, ಡಾ.ಸುಧಾಕರ್​​ಗೆ ಕೌನ್ಸೆಲಿಂಗ್ ಅಗತ್ಯವಿದೆ. ಇಂತಹ ವ್ಯಕ್ತಿಗಳಿಗೆ ವಿಶ್ವ ಮಾನಸಿಕ ಆರೋಗ್ಯ ದಿನದಂದು ಆಪ್ತ ಸಮಾಲೋಚನೆಯ ಅವಶ್ಯಕತೆ ಇದೆ. ಆಧುನಿಕ ಮಹಿಳೆ ತನಗೆ ಇಷ್ಟ ಬಂದಂತೆ ಜೀವಿಸಲಿ. ಇದನ್ನ ಬೇರೆಯವರು ನಿರ್ಧರಿಸೋದಲ್ಲ ಆಕೆಯೇ ನಿರ್ಧರಿಸಬೇಕು. ಮದುವೆಯಾದ ಬಳಿಕ ಏಕಾಂಗಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆ ಇದೆಯಾ? ಎಂದು ಟ್ವೀಟ್ ಮಾಡುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನೆ ಮಾಡಿದ್ದಾರೆ.

RELATED TOPICS:
English summary :Sudhakar

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...