Wed,May08,2024
ಕನ್ನಡ / English

ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ: ಎಚ್.ಡಿ ಕುಮಾರಸ್ವಾಮಿ ಆಕ್ರೋಶ | ಜನತಾ ನ್ಯೂಸ್

11 Oct 2021
2463

ಬೆಂಗಳೂರು : ಕನ್ನಡವನ್ನು ಕರ್ನಾಟದಿಂದಲೇ ಮೂಲೋತ್ಪಾಟನೆ ಮಾಡಬೇಕೆಂ ಬುದು ಬಿಜೆಪಿಯ ಹಿಡನ್ ಅಜೆಂಡಾವೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಅವರು, ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕ ದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ ಭಾಗವಹಿಸಿದ್ದ ಫೋಟೋ ಒಂದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದು, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ ಎಂದು ದೂರಿದ್ದಾರೆ.

ವೇದಿಕೆಯ ಮೇಲೆ ರಾಜ್ಯದ ಮುಖ್ಯಮಂತ್ರಿ, ಒಬ್ಬ ಸಚಿವರು, ಇಬ್ಬರು ಸಂಸದರು ಇದ್ದರು. ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು 3ನೇ ಸ್ಥಾನಕ್ಕಿಳಿಸಿದ್ದ ಆ ವೇದಿಕೆಯ ಮೇಲೆ ಕೂರಲು ಅವರಿಗೆ ಮನಃಸಾಕ್ಷಿಯಾದರೂ ಹೇಗೆ ಬಂತು? ಈ ಮೂವರ ಕನ್ನಡಾಭಿಮಾನ ಶೂನ್ಯತೆಗೆ ನನ್ನ ಧಿಕ್ಕಾರ ಎಂದು ಅಕ್ರೋಶ ವ್ಯಕ್ತಪಡಿಸಿದ್ದಾರೆ

ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ. ನಮ್ಮ ನಾಡು-ನುಡಿಯ ಮೇಲೆ ದಿಲ್ಲಿ ರಾಜಕಾರಣ ನಡೆಸುತ್ತಿರುವ ಆಕ್ರಮಣ ಸ್ವಾತಂತ್ರ್ಯಕ್ಕೂ ಮುನ್ನ ವಿದೇಶಿ ಆಕ್ರಮಣಕಾರರು ನಡೆಸಿದ ದಾಳಿಗಿಂತ ಹೇಯವಾಗಿದೆ. ದೇಶ ಮೊದಲು ಎಂದು ಕೂಗುವ ನಾಲಿಗೆಗಳಿಗೆ ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಲು ಏನಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಕನ್ನಡಕ್ಕೆ ಆಗುತ್ತಿರುವ ಅನ್ಯಾಯಗಳು ಒಂದೆರಡಲ್ಲ. ಕೇಂದ್ರ ಪರೀಕ್ಷೆಯಲ್ಲಿ ಅನ್ಯಾಯ, ನೇಮಕಾತಿಯಲ್ಲಿ ನಮ್ಮವರ ಕಡೆಗಣನೆ. ಒಕ್ಕೂಟ ವ್ಯವಸ್ಥೆಯಲ್ಲಿ ಪರಕೀಯರಂತೆ ಎರಡನೇ ದರ್ಜೆ ಪ್ರಜೆಗಳಾಗಿ ನಾವು ಕೊಳೆಯಬೇಕಾ? ಸ್ವಾಭಿಮಾನಿ ಕನ್ನಡಿಗರೆಲ್ಲರೂ ಸಿಡಿದೇಳೋಣ. ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ತಿಳಿಸಿದ್ದಾರೆ

RELATED TOPICS:
English summary :H D Kumaraswamy

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...