Mon,May20,2024
ಕನ್ನಡ / English

ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು, ರಾಷ್ಟ್ರ ರಾಜಕಾರಣ ಹೋಗಲು ಪುಕ್ಕಲುತನ ಇದೆ | ಜನತಾ ನ್ಯೂಸ್

11 Oct 2021
2424

ಮೈಸೂರು : ಕಾಂಗ್ರೆಸ್​ ವರಿಷ್ಠೆ ಸೋನಿಯಾ ಗಾಂಧಿ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ. ಅದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರಾಕರಿಸಿದ್ದಾರೆಂಬ ವಿಷಯ ಸಂಬಂಧ ಪ್ರತಿಕ್ರಿಯಿಸಿದ ಬಿಜೆಪಿ ಎಂಎಲ್​ಸಿ ಎಚ್​.ವಿಶ್ವನಾಥ್​ ಕಟುವಾಗಿ ಟೀಕಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು ಹಾಕಿದ್ದಾರೆ. ಸಿದ್ದರಾಮಯ್ಯನಿಗೆ ರಾಜಕೀಯ ಪುಕ್ಕಲುತನ ಇದೆ ಎಂದು ವ್ಯಂಗ್ಯವಾಡಿದರು.

ಐಟಿ ದಾಳಿಯಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಎಚ್. ವಿಶ್ವನಾಥ್, ಯಡಿಯೂರಪ್ಪ ಅವರ ಪರವಾಗಿ ಸಿದ್ದರಾಮಯ್ಯ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಹುಸಿ ಪ್ರೇಮ ಪ್ರದರ್ಶನ ಮಾಡುತ್ತಿದ್ದಾರೆ. ಯಡಿಯೂರಪ್ಪರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಆಗಿದ್ದ ಎಚ್.ಡಿ. ದೇವೇಗೌಡ ಈ ದೇಶದ ಪ್ರಧಾನಿಯಾದರು. ಪ್ರಧಾನಿಯಾಗುವ ಅವಕಾಶ ಸಿಕ್ಕಾಗ ಒಪ್ಪಿಕೊಳ್ಳುವ ಧೈರ್ಯ ತೋರಿದರು. ದೇವೇಗೌಡರಿಗೆ ಹೋಲಿಸಿದರೆ ಸಿದ್ದರಾಮಯ್ಯಗೆ ಧೈರ್ಯ ಇಲ್ಲ. 3ನೇ ಬಾರಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಕಳೆದ ಏಳು ವರ್ಷದಿಂದ ಪ್ರಧಾನಿಯಾಗಿದ್ದಾರೆ.

ಪ್ರಧಾನಿ ಹುದ್ದೆ ದೇಶದ ಪರಮೋಚ್ಚ ಸ್ಥಾನವಾಗಿದೆ. ನನಗೂ ಪ್ರಧಾನಿ ಹುದ್ದೆ ಕೊಟ್ಟರೆ ರಾಷ್ಟ್ರ ರಾಜಕಾರಣಕ್ಕೆ ಬರುತ್ತೇನೆ ಅಂತ ಸೋನಿಯಾ ಗಾಂಧಿಗೆ ಸಿದ್ದರಾಮಯ್ಯ ಹೇಳಬೇಕಿತ್ತು. ಅಲ್ಲಿಗೆ ಹೋಗದೆ ಇಲ್ಲಿಯೇ ಸಿದ್ದರಾಮಯ್ಯ ಏಕೆ ಮೋದಿ ವಿರುದ್ಧ ಗುಡುಗಬೇಕು ಎಂದು ಎಚ್ ವಿಶ್ವನಾಥ್ ಪ್ರಶ್ನಿಸಿದರು.

ಯಡಿಯೂರಪ್ಪ ಅವರ ಓಲೈಕೆಯಿಂದ ಲಿಂಗಾಯತ ಸಮುದಾಯದ ಮತ ಬರಲ್ಲ. ಯಡಿಯೂರಪ್ಪ ಅವರೇ ಸ್ವಾಗತ ಮಾಡಿರುವಾಗ ನಿಮ್ಮದೇನು ಕೊಸರು? ಇಂತಹ ಬೂಟಾಟಿಕೆ ಮಾತನಾಡುವುದು ಶೋಭಾಯಮಾನ ಅಲ್ಲ. ಸಿಬಿಐ, ಸಿಐಡಿ, ಐಟಿ, ಇಡಿ ಮುಂತಾದವು ಸಾಂವಿಧಾನಿಕ ಸಂಸ್ಥೆಗಳು. ಭ್ರಷ್ಟಾಚಾರದ ಮೇಲೆ ದಾಳಿ ಮಾಡುವಾಗ ನಿಮ್ಮದೇನು ತಕರಾರು? ನೀವು ಭ್ರಷ್ಟಾಚಾರದ ಪರವೋ, ವಿರುದ್ಧವೋ ಎಂದು ಪ್ರಶ್ನಿಸಿದರು.

RELATED TOPICS:
English summary :Mysuru

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...