ರಾಜ್ಯದಲ್ಲಿಂದು 326 ಮಂದಿಗೆ ಕೊರೊನಾ ದೃಢ, 380 ಚೇತರಿಕೆ, 4 ಸಾವು | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 326 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98, 3459 ಕ್ಕೆ ಏರಿಕೆಯಾಗಿದೆ.
380 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಒಟ್ಟು ಬಿಡುಗಡೆಯಾದವರ ಸಂಖ್ಯೆ 2,93,6039ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿಗೆ 4 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 37,941ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 9,450 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.41ರಷ್ಟಿದ್ದರೆ, ಸಾವಿನ ಪ್ರಮಾಣ 1.22 ರಷ್ಟಿದೆ.
ಬೆಂಗಳೂರಿನಲ್ಲಿ 173 ಹೊಸ ಪ್ರಕರಣ ಪತ್ತೆಯಾಗಿದ್ದು, 87 ಸೋಂಕಿತರು ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಓರ್ವ ಸೋಂಕಿತ ಮೃತಪಟ್ಟಿದ್ದಾರೆ.
ಬಾಗಲಕೋಟೆ, ಬೀದರ್, ದಾವಣಗೆರೆ, ಗದಗ, ಹಾವೇರಿ, ಕೊಪ್ಪಳ, ರಾಮನಗರ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.