ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ! | ಜನತಾ ನ್ಯೂಸ್
ಕಲಬುರಗಿ : ಮೂವರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲೂಕಿನ ಮಾಡ್ಕಾಳ್ ಗ್ರಾಮದಲ್ಲಿ ನಡೆದಿದೆ.
ತಾಯಿ ಲಕ್ಷ್ಮಿ ಏಳಕೆ (28), ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತರು ಎಂದು ಗುರುತಿಸಲಾಗಿದೆ. ಮುಳುಗುತ್ತಿದ್ದ ಈಶ್ವರಿ (4)ಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ ಹಾಗೂ ಗಂಡನ ಮನೆಯವರ ಕಿರುಕುಳ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ನಿಂಬರ್ಗಾ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
RELATED TOPICS:
English summary :Kalburgi