Tue,Apr23,2024
ಕನ್ನಡ / English

ನೀವು ನಿಶ್ಚಿಂತರಾಗಿ ದೇಶವನ್ನು ರಕ್ಷಿಸಿ, ಮೋದಿ ಸರ್ಕಾರವು ನಿಮ್ಮ ಕುಟುಂಬಗಳನ್ನು ನೋಡಿಕೊಳ್ಳುತ್ತದೆ - ಗೃಹಮಂತ್ರಿ ಷಾ | ಜನತಾ ನ್ಯೂಸ್

25 Oct 2021
2227

ಶ್ರೀನಗರ : ಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿರುವ ಗೃಹ ಮಂತ್ರಿ ಅಮಿತ್ ಷಾ ಅವರು ನಿನ್ನೆ ರವಿವಾರ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಪೋಸ್ಟ್‌ಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದ್ದಾರೆ.

ನಿನ್ನೆ ಮಕ್ವಾಲ್ ಗಡಿಯ ಮುಂದಿರುವ ಪ್ರದೇಶಗಳಿಗೆ ಭೇಟಿ ನೀಡಿದ ಷಾ ಅವರು ಗಡಿಯ ಸ್ಥಳೀಯ ನಿವಾಸಿಗಳ ಮೊಬೈಲ್ ಸಂಖ್ಯೆಯನ್ನು ತೆಗೆದುಕೊಂಡು, ತಮ್ಮ ಮೊಬೈಲ್ ನಂಬರ್ ನ್ನೂ ಸಹ ಹಂಚಿಕೊಂಡಿದ್ದಾರೆ ಮತ್ತು ಆ ವ್ಯಕ್ತಿ ಯಾವಾಗ ಬೇಕಾದರೂ ಅವರನ್ನು ಸಂಪರ್ಕಿಸಬಹುದು, ಎಂದು ಆ ಸ್ಥಳೀಯ ನಿವಾಸಿಗೆ ಹೇಳಿದ್ದು ವಿಶೇಷವಾಗಿದೆ.

janata

ಗೃಹ ಮಂತ್ರಿ ಅಮಿತ್ ಷಾ ಅವರು ಈ ಬಿಎಸ್‌ಎಫ್ ಪೋಸ್ಟ್‌ಗೆ ಭೇಟಿ ನೀಡಿ ಯೋಧರೊಂದಿಗೆ ಸಂವಾದ ನಡೆಸಿದ್ದು ನಮಗೆ ಹೆಮ್ಮೆಯ ವಿಷಯ. ಅವರು ನಮ್ಮ ಬ್ರೀಫಿಂಗ್ ಅನ್ನು ಆಲಿಸಿದರು. ನಾವು ಅವರಿಗೆ ಎಲ್ಲಾ ಗಡಿ ಸಂಬಂಧಿತ ಸಮಸ್ಯೆಗಳ ಬಗ್ಗೆ ಹೇಳಿದ್ದೇವೆ, ಅವರು ಗಡಿ ಪ್ರಾಬಲ್ಯದ ಬಗ್ಗೆ ಸಂತೋಷ ವ್ಯಕ್ತಪಡಿಸಿದರು, ಎಂದು ಜಮ್ಮುವಿನ ಮಕ್ವಾಲ್ ಬಾರ್ಡರ್‌ನಲ್ಲಿರುವ ಬಿಎಸ್‌ಎಫ್ ನ ಎಡಿಜಿ ವೆಸ್ಟರ್ನ್ ಕಮಾಂಡ್, ಏನ್.ಎಸ್.ಜಮ್ವಾಲ್ ಮಾದ್ಯಮಗಳಿಗೆ ತಿಳಿಸಿದ್ದಾರೆ.

ಗೃಹ ಸಚಿವರು ನಮ್ಮ ಯೋಧರೊಂದಿಗೆ ಸಂವಹನ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ್ದು ಒಂದು ದೊಡ್ಡ ಪ್ರೋತ್ಸಾಹ. ಇದು ಜವಾನರ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ, ಇದು ಅವರ ಮನೋಬಲವನ್ನು ಹೆಚ್ಚಿಸುತ್ತದೆ. ನಮ್ಮ ಸುರಂಗಗಳು ಮತ್ತು ಡ್ರೋನ್‌ಗಳ ಸಮಸ್ಯೆಗಳನ್ನು ಗಮನಿಸಲಾಗುತ್ತಿದೆ ಮತ್ತು ಅದನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಅವರು(ಕೇಂದ್ರ ಗೃಹ ಸಚಿವ ಅಮಿತ್ ಶಾ) ಭರವಸೆ ನೀಡಿದ್ದಾರೆ, ಎಂದು ಏನ್.ಎಸ್.ಜಮ್ವಾಲ್ ಹೇಳಿದ್ದಾರೆ.

ಯೋಧರನ್ನು ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಗೃಹ ಮಂತ್ರಿಯವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ದೇಶವನ್ನು ರಕ್ಷಿಸುವ ನಮ್ಮ ಭದ್ರತಾ ಪಡೆಗಳ ಕಲ್ಯಾಣಕ್ಕೆ ಮತ್ತು ಅವರ ಕುಟುಂಬಗಳ ಆರೈಕೆಗೆ ಸಂಪೂರ್ಣವಾಗಿ ಸಮರ್ಪಿತವಾಗಿದೆ. ನೀವು ನಿಶ್ಚಿಂತರಾಗಿ ದೇಶವನ್ನು ರಕ್ಷಿಸಬೇಕು. ಮೋದಿ ಸರ್ಕಾರವು ನಿಮ್ಮ ಕುಟುಂಬಗಳನ್ನು ನೋಡಿಕೊಳ್ಳುತ್ತದೆ, ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ, ಎಂದಿದ್ದಾರೆ.

ಅಕ್ಟೋಬರ್ 23ರಂದು ಆರಂಭಗೊಂಡ ಗೃಹ ಸಚಿವರ ಕೇಂದ್ರಾಡಳಿತ ಪ್ರದೇಶಕ್ಕೆ ಮೂರು ದಿನಗಳ ಭೇಟಿಯ ಕೊನೆಯ ದಿನವಾದ ಇಂದು ಶ್ರೀನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

RELATED TOPICS:
English summary :You protect nation tension freely, Modi govt will take care of your family - Home Min. Shah

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ನ್ಯೂಸ್ MORE NEWS...