Sun,May19,2024
ಕನ್ನಡ / English

ಭೀಕರ ಅಪಘಾತ: ತಾಯಿ- ಮಗು ಮೇಲೆ ಹರಿದ ಲಾರಿ, ಸ್ಥಳದಲ್ಲೇ ಸಾವು | ಜನತಾ ನ್ಯೂಸ್

25 Oct 2021
2973

ಬೆಂಗಳೂರು : ಅತಿವೇಗವಾಗಿ ಬಂದ ಟಿಪ್ಪರ್ ಲಾರಿ ಮುಂದೆ ಹೋಗುತ್ತಿದ್ದ ಎನ್‌ಫೀಲ್ಡ್ ಬೈಕ್​ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ತಾಯಿ-ಮಗು ಮೇಲೆ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾರತ್ ಹಳ್ಳಿ ಹೊರವರ್ತುಲ ರಸ್ತೆ ಬಳಿ ನಡೆದಿದೆ.

ಮೂಲತಃ ತಮಿಳುನಾಡಿನ ಧರ್ಮಪುರಿಯವರಾದ ಶಿವಕುಮಾರ್ ಕೆ.ಆರ್.ಪುರಂನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ವಾಸವಾಗಿದ್ದರು.

ಶಿವಕುಮಾರ್ ತಮ್ಮನಿಗಾಗಿ ನೋಡಿದ್ದ ಹುಡುಗಿಯನ್ನು ಗೊತ್ತುಪಡಿಸಲು ಕುಟುಂಬದ ಜೊತೆ ಬೈಕ್​ನಲ್ಲಿ ಇಂದು ಬೆಳಗ್ಗೆ ಧರ್ಮಪುರಿಗೆ ಹೊರಟಿದ್ದರು. ಈ ವೇಳೆ ಮಾರತ್​ ಹಳ್ಳಿ ಹೊರವರ್ತುಲ ರಸ್ತೆ ಬಳಿ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಪರಿಣಾಮ ಬೈಕ್ ಸವಾರ ಶಿವಕುಮಾರ್ ಎಡಭಾಗದಲ್ಲಿ ಬಿದ್ದಿದ್ದಾರೆ. ಹಿಂಬದಿ ಸವಾರರಾಗಿದ್ದ ಪತ್ನಿ ಶ್ರೀದೇವಿ ಹಾಗೂ ಒಂದು ವರ್ಷದ ಗಂಡು ಮಗು ದೀಕ್ಷಿತ್ ರಸ್ತೆ ಬಲಭಾಗದಲ್ಲಿ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಿಪ್ಪರ್ ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ಕಳೆದುಕೊಂಡು ಬೈಕ್​ಗೆ ಗುದ್ದಿದ್ದಾನೆ ಎನ್ನಲಾಗಿದೆ. ಘಟನೆಗ ಕಾರಣರಾದ ಟಿಪ್ಪರ್ ಚಾಲಕ ನಾಪತ್ತೆಯಾಗಿದ್ದಾನೆ.

ಮಾಹಿತಿ ಆಧರಿಸಿ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಅಲ್ಲದೇ ಶಿವಕುಮಾರ್​ ಅವರ ಪತ್ನಿ ಮತ್ತು ಮಗುವಿನ ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ.

RELATED TOPICS:
English summary :Bangalore

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...