Fri,May10,2024
ಕನ್ನಡ / English

ರಾಜ್ಯ ಉಪಚುನಾವಣೆ : ಒಂದೊಂದು ಸ್ಥಾನ ಗೆದ್ದುಕೊಂಡ ಬಿಜೆಪಿ, ಕಾಂಗ್ರೆಸ್ | ಜನತಾ ನ್ಯೂಸ್

03 Nov 2021
1903

ಬೆಂಗಳೂರು : ರಾಜ್ಯದಲ್ಲಿ ನಡೆದ ಉಪಚುನಾವಣೆಯ ಫಲಿತಾಂಶಗಳು ನಿನ್ನೆ ಮಂಗಳವಾರ ಪ್ರಕಟವಾಗಿದ್ದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿಯ ಹಾನಗಲ್‌ನಲ್ಲಿ ಬಿಜೆಪಿಯ ಸೋಲು ನುಂಗಲಾಗದ ತುತ್ತಾಗಿದೆ. ಈಗಷ್ಟೇ 100 ದಿನಗಳ ಸರ್ಕಾರ ಪೂರೈಸುತ್ತಿರುವ ಸಿಎಂ ಬೊಮ್ಮಾಯಿ ಅವರಿಗೆ ಹಾನಗಲ್‌ನಲ್ಲಿ ಭಾರೀ ನಷ್ಟ ಉಂಟಾಗಿದೆ.

ಸಿಂದಗಿ ಜೆಡಿಎಸ್‌ ಶಾಸಕ ಎಂ.ಸಿ.ಮನಗೂಳಿ ಮತ್ತು ಹಾನಗಲ್‌ನಲ್ಲಿ ಬಿಜೆಪಿಯ ಸಿ.ಎಂ.ಉದಾಸಿ ಅವರ ನಿಧನದ ಹಿನ್ನೆಲೆಯಲ್ಲಿ ಎರಡು ಸ್ಥಾನಗಳು ತೆರವಾದ ಕಾರಣ ಉಪಚುನಾವಣೆ ಅನಿವಾರ್ಯವಾಗಿತ್ತು.

ಏತನ್ಮಧ್ಯೆ, ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಅವರು ಕಾಂಗ್ರೆಸ್‌ನ ಸಮೀಪದ ಪ್ರತಿಸ್ಪರ್ಧಿಯನ್ನು 31,185 ಮತಗಳ ಭಾರಿ ಅಂತರದಿಂದ ಸೋಲಿಸಿದ್ದಾರೆ. ಬಿಜೆಪಿಯ ಭೂಸನೂರ 93,865 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶೋಕ ಮನಗೂಳಿ 62,680 ಮತಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹಾನಗಲ್‌ನಲ್ಲಿ ಕಾಂಗ್ರೆಸ್‌ನ ಶ್ರೀನಿವಾಸ್ ಮಾನೆ 87,490 ಮತಗಳನ್ನು ಗಳಿಸಿ 7,373 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಿವರಾಜ್ ಸಜ್ಜನರ್ 80,117 ಮತಗಳನ್ನು ಪಡೆದರು.

ಸಿಂದಗಿಯಿಂದ ಜೆಡಿಎಸ್‌ನ ನಾಜಿಯಾ ಶಕೀಲ್ ಅಹ್ಮದ್ ಅಂಗಡಿ ಮತ್ತು ಹಾನಗಲ್‌ನಲ್ಲಿ ನಿಯಾಜ್ ಶೇಖ್ ಕ್ರಮವಾಗಿ 4,353 ಮತ್ತು 927 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದರು.

RELATED TOPICS:
English summary :Byelection ; BJP, Congress wins each one seat

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...