Sat,Apr27,2024
ಕನ್ನಡ / English

ನಾನು ದಲಿತರ ಬಗ್ಗೆ ಎಲ್ಲಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ: ಸಿದ್ದರಾಮಯ್ಯ | ಜನತಾ ನ್ಯೂಸ್

03 Nov 2021
2109

ಬೆಂಗಳೂರು : ನಾನು ಎಲ್ಲಿಯೂ ದಲಿತರನ್ನು ಅಗೌರವಿಸುವ ಮಾತು ಆಡಿಲ್ಲ.. ರಾಜಕೀಯ ಸ್ವಾರ್ಥಕ್ಕಾಗಿ ನನ್ನ ವಿರುದ್ಧ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅಂದು ದಲಿತ ಸಮಾವೇಶದಲ್ಲಿ ನೂರಾರು ಜನ ಎಡಗೈ ಸಮುದಾಯದವರಿದ್ದರು. ನಾನು ದಲಿತರ ಬಗ್ಗೆ ಹೇಳಿದ್ದರೆ ಅಲ್ಲೇ ಪ್ರತಿಭಟನೆ ಮಾಡಬೇಕಿತ್ತಲ್ಲ. ಅಲ್ಲಿದ್ದವರೇ ನನ್ನ ಮಾತಿಗೆ ಜೈಕಾರ ಹಾಕಿದ್ದಾರೆ. ಈಗ ಬಿಜೆಪಿಯವರು ಬಣ್ಣ ಕಟ್ಟುತ್ತಿದ್ದಾರೆ.

ಬಿಜೆಪಿ ಪ್ರತಿಭಟನೆಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.ದಲಿತ ಲೀಡರ್ಸ್ ಸಾಕಷ್ಟು ಮಂದಿ ಇದ್ದಾರೆ. ದಲಿತರ ಬಗ್ಗೆ ಅಪಾರ ಅಭಿಮಾನ ನನಗಿದೆ. ಅವರು ಮೇಲೆ ಬರಬೇಕೆಂಬುದು ನನ್ನ ಇಚ್ಚೆ. ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಏನಿದೆ?. ಅಂಬೇಡ್ಕರ್ ಕಾರ್ಮಿಕ ಮಂತ್ರಿ ಮಾಡಿದ್ದು ಯಾವ ಪಕ್ಷ? ಆಗ ಬಿಜೆಪಿ ಪಕ್ಷ ಇತ್ತಾ? ಅಂಬೇಡ್ಕರ್ ಅವರದ್ದೂ ರಿಪಬ್ಲಿಕ್ ಪಾರ್ಟಿ ಇತ್ತು. ಆದರೂ ನೆಹರು ಅವರನ್ನು ಸಚಿವರನ್ನಾಗಿ ಮಾಡಿದ್ದರು ಎಂದರು.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಗೋವಿಂದ ಕಾರಜೋಳ, ರಮೇಶ್ ಜಿಗಜಿಣಗಿ, ನಾರಾಯಣ ಸ್ವಾಮಿ ಮೊದಲಾದವರು ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಸಂವಿಧಾನವನ್ನು ವಿರೋಧಿಸುವ ಬಿಜೆಪಿ ಜೊತೆ ಸ್ವಾರ್ಥಕ್ಕಾಗಿ ಸೇರಿದ್ದಾರೆ ಎಂದು ಸಿಂದಗಿಯಲ್ಲಿ ನಡೆದ ಮಾದಿಗ ದಂಡೋರಾ ಸಭೆಯಲ್ಲಿ ಹೇಳಿದ್ದೆ ಹೊರತು ಎಲ್ಲಿಯೂ ದಲಿತರನ್ನು ಅಗೌರವಿಸುವ ಮಾತು ಆಡಿಲ್ಲ.

ಕೇಂದ್ರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇವೆ ಎಂದಾಗ, ದಲಿತರನ್ನು ನಾಯಿಗಳು ಎಂದು ತುಚ್ಚೀಕರಿಸಿದಾಗ ಬಾಯಿ ಮುಚ್ಚಿಕೊಂಡಿದ್ದ ಬಿಜೆಪಿ ದಲಿತ ನಾಯಕರು, ಈಗ ನನ್ನ ವಿರುದ್ಧ ಕೂಗು ಹಾಕುತ್ತಿರುವುದು ರಾಜಕೀಯ ಸ್ವಾರ್ಥಕ್ಕಾಗಿ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದ್ದಾರೆ.

ನನ್ನನ್ನು ದಲಿತ ವಿರೋಧಿ ಎಂದು ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ನನ್ನದೊಂದು ಸಣ್ಣ ಸವಾಲು. ರಾಜ್ಯ ಬಜೆಟ್ ನ ಶೇಕಡಾ 24.1ರಷ್ಟು ಭಾಗವನ್ನು ಮೀಸಲಿಡುವ SCSP/TSP ಕಾಯ್ದೆಯನ್ನು ನಾನು ಜಾರಿಗೆ ತಂದಿದ್ದೆ. ಪ್ರಧಾನಿ ಮೋದಿ ಅವರಿಗೆ ಹೇಳಿ ರಾಷ್ಟ್ರಮಟ್ಟದಲ್ಲಿ ಅದನ್ನು ಜಾರಿಗೆ ತರುವಂತೆ ಮಾಡಿ ನೋಡೋಣ. 2008-09ರಿಂದ 2012-13ನೇ ಸಾಲಿನವರೆಗೆ ಬಿಜೆಪಿ ಸರ್ಕಾರ SCSP/TSP ಯೋಜನೆಯಡಿ ಖರ್ಚು ಮಾಡಿದ್ದು ಕೇವಲ ರೂ.22,261 ಕೋಟಿ. ನಮ್ಮ ಸರ್ಕಾರದ ಅವಧಿಯಲ್ಲಿ ರೂ. 88,395 ಕೋಟಿ. ಯಾರು ದಲಿತ ವಿರೋಧಿ? ನಾನಾ? ಬಿಜೆಪಿ ನಾಯಕರಾ? ಎಂದು ಕಿಡಿಕಾರಿದ್ದಾರೆ.

RELATED TOPICS:
English summary :Siddaramaiah

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...