ಬಿಡದಿಯ ತೋಟದ ಮನೆಯಲ್ಲಿ ಗೋ ಪೂಜೆ ನೆರವೇರಿಸಿದ HDK ದಂಪತಿ! | ಜನತಾ ನ್ಯೂಸ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪತ್ನಿ ಅನಿತಾ ಕುಮಾರಸ್ವಾಮಿ ಬಿಡದಿಯ ತೋಟದ ಮನೆಯಲ್ಲಿ ಗೋ ಪೂಜೆ ನೆರವೇರಿಸಿದರು..
ಈ ಕುರಿತು ಟ್ವೀಟ್ ಮಾಡಿರುವ ಹೆಚ್ಡಿಕೆ, ಭಾಗವತ ಪುರಾಣದ ಪ್ರಕಾರ ಕಾರ್ತಿಕ ಶುಕ್ಲ ಪಾಡ್ಯಮಿಯ ದಿನ ಶ್ರೀಕೃಷ್ಣ ಪರಮಾತ್ಮನು ಇಂದ್ರನನ್ನು ಸೋಲಿಸಿದ ದಿನವೂ ಹೌದು. ಇಂದ್ರನ ದಾಳಿಯಿಂದ ತನ್ನ ಗೋ ಸಮೂಹವನ್ನು ರಕ್ಷಿಸಲು ಗೋಪಾಲನು ಗೋವರ್ಧನ ಗಿರಿಯನ್ನೆತ್ತಿದ ದಿನವಿದು. ಆದ್ದರಿಂದಲೇ ಇಂದು ಗೋ ಪೂಜೆ, ಗೋವರ್ಧನ ಪೂಜೆ. ಕೆಲವೆಡೆ ರೈತರು ಹಟ್ಟಿಹಬ್ಬವೆಂದು ಆಚರಿಸುತ್ತಾರೆ ಎಂದು ಬರೆದಿದ್ದಾರೆ..
English summary :HD Kumaraswamy