Fri,May17,2024
ಕನ್ನಡ / English

ಮನೆ ಬಾಡಿಗೆ ಕಟ್ಟಲು ಇಟ್ಟಿದ್ದ ಹಣದಲ್ಲಿ ಒಡವೆ ಖರೀದಿಸಿದ ಪತ್ನಿ, ಜಗಳ ಪತ್ನಿ ಕೊಲೆಯಲ್ಲಿ ಅಂತ್ಯ | ಜನತಾ ನ್ಯೂಸ್

06 Nov 2021
1846

ಬೆಂಗಳೂರು : ಮನೆ ಬಾಡಿಗೆಗೆ ಎತ್ತಿಟ್ಟಿದ್ದ ಹಣದಲ್ಲಿ ಆಭರಣ ಖರೀದಿಸಿದ ವಿಚಾರಕ್ಕೆ ದಂಪತಿ ನಡುವೆ ಆರಂಭವಾದ ಜಗಳ ಪತ್ನಿ ಕೊಲೆಯಲ್ಲಿ ಅಂತ್ಯವಾಗಿದ್ದು, ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಯಾನಂದ‌ ನಗರದಲ್ಲಿ ವಾಸವಿದ್ದ ನಾಜೀಯಾ ಕೊಲೆಯಾದ ಮಹಿಳೆ. ಆಟೋ ಚಾಲಕನಾದ ಫಾರೂಕ್​ ಬಂಧಿತ ಪತಿ. ಇವರಿಗೆ ಮೂರು ಮಕ್ಕಳಿದ್ದಾರೆ.

ಬಾಡಿಗೆ ಆಟೋ ಓಡಿಸುತ್ತಿದ್ದ ಫಾರುಖ್ ಮತ್ತು ಪತ್ನಿ ನಾಜೀಯ 2 ವರ್ಷದಿಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ವಾರದ ಹಿಂದೆ ಫಾರುಖ್​​ ಪತ್ನಿಗೆ ಬಾಡಿಗೆ ಕೊಡಲು ಇಟ್ಟುಕೊಳ್ಳುವಂತೆ 6,500 ರೂ. ಹಣ ಕೊಟ್ಟಿದ್ದ. ಆದರೆ ಆ ಹಣದಲ್ಲಿ ನಾಜೀಯ ಡ್ಯೂಪ್ಲಿಕೇಟ್ ಜ್ಯುವೆಲರಿ ಖರೀದಿಸಿ ಖರ್ಚು ಮಾಡಿಕೊಂಡಿದ್ದಳು.

ನ. 2 ರಂದು ಮನೆ ಬಾಡಿಗೆ ಕಟ್ಟಲು ಪತಿ ಹಣ ಕೇಳಿದಾಗ, ನಾಜೀಯಾ ಆಭರಣ ಖರೀದಿಸಿರುವುದು ಗೊತ್ತಾಗಿದೆ. ಇದರಿಂದ ಸಿಟ್ಟಿಗೆದ್ದ ಫಾರೂಕ್ ಪತ್ನಿಯನ್ನ ಪ್ರಶ್ನಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಜಗಳ ನಡೆದಿದೆ. ಗಲಾಟೆ ವೇಳೆ ಫಾರುಕ್, ಪತ್ನಿ ನಾಜೀಯಾಗೆ ಕೈಯಿಂದ ಹಲ್ಲೆ ಮಾಡಿ ತಲೆಯನ್ನು ಗೋಡೆಗೆ ಜಜ್ಜಿದ್ದ. ಹಲ್ಲೆಯಿಂದ ಗಾಯಗೊಂಡ ಪತ್ನಿಯ ಸ್ಥಿತಿ ಗಂಭೀರವಾಗಿತ್ತು.

ತಕ್ಷಣ ಪತ್ನಿಯನ್ನು ಫಾರೂಕ್ ಆಸ್ಪತ್ರೆಗೆ ದಾಖಲು ಮಾಡಲು ಮುಂದಾಗಿದ್ದ. ಆದರೆ ಎರಡು ಆಸ್ಪತ್ರೆಗಳಲ್ಲಿ ನಾಜೀಯಾ ಅವರನ್ನು ದಾಖಲು ಮಾಡಿಕೊಂಡಿಲ್ಲ ಎನ್ನಲಾಗಿದೆ. ಬೇರೊಂದು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚನೆ ನೀಡಲಾಗಿದ್ದು, ಆ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆ ನಾಜೀಯಾ ಪ್ರಾಣ ಬಿಟ್ಟಿದ್ದಳು. ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಫಾರೂಕ್​ನನ್ನು ಬಂಧಿಸಿದ್ದಾರೆ.

RELATED TOPICS:
English summary :Bangalore

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...