ಕೇದಾರನಾಥದ ಶಂಕರಾಚಾರ್ಯರ ಮೂರ್ತಿ ನೋಡಬೇಕೆನಿಸಿದೆ: ಪ್ರಧಾನಿ ಮೋದಿಗೆ ಹೆಚ್ಡಿ ದೇವೇಗೌಡರಿಂದ ಪತ್ರ | ಜನತಾ ನ್ಯೂಸ್
ಬೆಂಗಳೂರು : ನನಗೆ ನೀವು (ಪ್ರಧಾನ ಮಂತ್ರಿ ನರೇಂದ್ರ ಮೋದಿ) ಕೇದಾರನಾಥದಲ್ಲಿ ಉದ್ಘಾಟಿಸಿದ ಶ್ರೀ ಆದಿಶಂಕರಾಚಾರ್ಯರ ಕಪ್ಪು ಕಲ್ಲಿನ ಸುಂದರ ಮೂರ್ತಿಯನ್ನು ನೋಡಬೇಕು ಅನಿಸಿದೆ.
ಈ ಪವಿತ್ರ ಕ್ಷೇತ್ರವನ್ನು ಪುನರ್ನಿರ್ಮಾಣ ಮಾಡುವಲ್ಲಿ ನೀವು ಕೈಗೊಂಡ ಕಾರ್ಯಗಳಿಗಾಗಿ ನಾನು ನಿಮಗೆ ಶುಭಾಶಯ ಕೋರುತ್ತೇನೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪತ್ರದ ಮುಖೇನ ತಿಳಿಸಿದ್ದಾರೆ.
ಪತ್ರದಲ್ಲಿ ಏನಿದೆ?
ಕೇದಾರನಾಥದಲ್ಲಿ ನವೆಂಬರ್ 5 ರಂದು ನೀವು ಅನಾವರಣಗೊಳಿಸಿದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಕಂಡು ತುಂಬಾ ಸಂತೋಷವಾಗಿದೆ. ನಿಮಗೆ ಇದಕ್ಕಾಗಿ ಧನ್ಯವಾದ ತಿಳಿಸುತ್ತೇನೆ. ನಾನು ಕರ್ನಾಟಕದ ಚಿಕ್ಕಮಗಳೂರಿನ ಶೃಂಗೇರಿ ಶಾರದಾ ಪೀಠದ ಮತ್ತು ಶೃಂಗೇರಿ ಮಠದ ಭಕ್ತನಾಗಿದ್ದೇನೆ. ನಿಮಗೆ ತಿಳಿದಿರುವಂತೆ ಮಹಾನ್ ಸಂತ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟ್ಟ ನಾಲ್ಕು ಶಕ್ತಿಕೇಂದ್ರಗಳಲ್ಲಿ ಇದೂ ಕೂಡ ಒಂದು. ಶೃಂಗೇರಿ ಮಠವು ಸರ್ವಧರ್ಮ ಸಮನ್ವಯದ ಸಂಕೇತವಾಗಿದೆ.
ಮೈಸೂರು ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶೃಂಗೇರಿ ಮಠವು ಶತಮಾನಗಳಿಂದ, ವಿವಿಧ ರಾಜರ, ಆಡಳಿತಗಾರರ ಜೊತೆಗೆ ಧಾರ್ಮಿಕ ಕೇಂದ್ರವಾಗಿ ಒಗ್ಗೂಡಿಸಿಕೊಂಡು ನಡೆದಿರುವುದು ವಿಶೇಷ ಎಂದು ದೇವೇಗೌಡ ಶೃಂಗೇರಿ ಮಠದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಒಡೆಯರ್, ಪೇಶ್ವ, ಕೆಳದಿ ಮತ್ತು ತಿರುವಾಂಕೂರು ಆಳ್ವಿಕೆಯು ಮಠದಿಂದ ಲಾಭಾಂಶ ಪಡೆದುಕೊಂಡಿವೆ. ಮೈಸೂರು ರಾಜರಾದ ಹೈದರ್ ಅಲಿ ಹಾಗೂ ಟಿಪ್ಪು ಸುಲ್ತಾನ್ ಮತ್ತು ಹೈದರಾಬಾದ್ನ ನಿಜಾಮರು ಕೂಡ ಈ ಧಾರ್ಮಿಕ ಸ್ಥಳದಿಂದ ಒಳಿತನ್ನು ಪಡೆದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಧರ್ಮ ಕ್ಷೇತ್ರದ ಮಾರ್ಗದರ್ಶನವು ಇಂದಿನ ದಿನದ ವರೆಗೂ ಮುಂದುವರಿದಿದೆ. ಶೃಂಗೇರಿ ಮಠ, ವೈಯಕ್ತಿಕವಾಗಿ ನನಗೆ ಸಮಾಜದ ಸಾಮರಸ್ಯದ ಕೇಂದ್ರವಾಗಿ ಕಂಡಿದೆ. ಈ ಪವಿತ್ರ ಕ್ಷೇತ್ರದಿಂದ ನನ್ನ ಜೀವನದಲ್ಲಿ ಪಡೆದುಕೊಂಡ ಆಶೀರ್ವಾದಕ್ಕೆ ನಾನು ಚಿರಋಣಿಯಾಗಿ ಇರುತ್ತೇನೆ ಎಂದು ದೇವೇಗೌಡ ತಿಳಿಸಿದ್ದಾರೆ.