ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ಯುವತಿಯ ನಗ್ನ ಫೋಟೋ ಹರಿಯಬಿಟ್ಟ ಪ್ರೇಮಿ ವಿರುದ್ಧ ದೂರು ದಾಖಲು | ಜನತಾ ನ್ಯೂಸ್
ಹುಬ್ಬಳ್ಳಿ : ಪ್ರೇಮಿಯೊಬ್ಬ ಯುವತಿಯನ್ನು ಪ್ರೀತಿಸುವುದಾಗಿ ನಂಬಿಸಿ ನಗ್ನ ವೀಡಿಯೋ ಕಾಲ್ ಮಾಡಿದ್ದ. ನಗ್ನ ಫೋಟೋ ಎಡಿಟ್ ಮಾಡಿ ವಾಟ್ಸಪ್ ಸ್ಟೇಟಸ್ಗೆ ಇಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ವಿರುದ್ಧ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರೇಮಿ ಅದೇ ಕಾಲೇಜಿನ ಕಿರಿಯ ವಿದ್ಯಾರ್ಥಿನಿಯ ಸ್ನೇಹ ಸಂಪಾದಿಸಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸಪ್ ನಂಬರ್ ಪಡೆದಿದ್ದಾನೆ. ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯ ನಗ್ನ ವೀಡಿಯೋ ಕಾಲ್ ರೆಕಾರ್ಡ್ ಮಾಡಿಕೊಂಡಿದ್ದ.
ವಾಟ್ಸ್ಆ್ಯಪ್ ಸ್ಟೇಟಸ್ನಲ್ಲಿ ತನ್ನ ನಗ್ನ ಫೋಟೋಗಳನ್ನು ನೋಡಿ ಈ ಘಟನೆ ಬಗ್ಗೆ ಯುವತಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.