Sat,May18,2024
ಕನ್ನಡ / English

ಟಿಎಂಸಿ ಶಾಸಕರನ್ನು ಬಂಧಿಸಿದಕ್ಕಾಗಿ ಸಿಬಿಐ, ಇಡಿ ವಿರುದ್ಧ ವಿಶೇಷಾಧಿಕಾರದ ನಿರ್ಣಯ ಮಂಡನೆ | ಜನತಾ ನ್ಯೂಸ್

17 Nov 2021
2258

ಕೊಲ್ಕೊತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತ್ರತ್ವದ ಆಡಳಿತರೂಡ ತೃಣ ಮೂಲ ಕಾಂಗ್ರೆಸ್(ಟಿಎಂಸಿ) ಶಾಸಕರನ್ನು ಬಂಧಿಸಿದಕ್ಕಾಗಿ ಕೇಂದ್ರ ತನಿಖಾ ದಳ(ಸಿಬಿಐ)ದ ಇಬ್ಬರು ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ(ಇಡಿ)ದ ವಿರುದ್ಧ ಬುಧವಾರ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ವಿಶೇಷಾಧಿಕಾರದ ನಿರ್ಣಯವನ್ನು ಮಂಡಿಸಲಾಯಿತು.

ನಾರದ ಕುಟುಕು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಟಿಎಂಸಿ ಶಾಸಕರನ್ನು ಬಂಧಿಸುವ ಸಂದರ್ಭದಲ್ಲಿ ಸಭಾಧ್ಯಕ್ಷರ ಪೀಠದ ಘನತೆ ಕಡಿಮೆ ಮಾಡಿದ ಆರೋಪ ಸಿಬಿಐ ಮತ್ತು ಇಡಿ ಇಬ್ಬರು ಅಧಿಕಾರಿಗಳ ವಿರುದ್ಧ ವಿಶೇಷಾಧಿಕಾರದ ನಿರ್ಣಯ ಮಂಡನೆ ಮಾಡಲಾಗಿದೆ.

ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಈ ಕುರಿತು ಮಾತನಾಡಿದ್ದು, "ಪ್ರಸ್ತಾವನೆಯನ್ನು ಪಶ್ಚಿಮ ಬಂಗಾಳದ ಅಸೆಂಬ್ಲಿಯಲ್ಲಿ ಧ್ವನಿ ಮತದೊಂದಿಗೆ ಅಂಗೀಕರಿಸಲಾಗಿದೆ ಮತ್ತು ವಿಶೇಷಾಧಿಕಾರ ಸಮಿತಿಗೆ ಕಳುಹಿಸಲಾಗಿದೆ, ಅಲ್ಲಿ ಬಿಜೆಪಿ ಸದಸ್ಯರ ಪ್ರಬಲ ವಿರೋಧವನ್ನು ನೋಡುತ್ತದೆ. ಬಹುತೇಕ ಎಲ್ಲ ಹಗರಣಗಳಲ್ಲಿ ಭಾಗಿಯಾಗಿರುವುದರಿಂದ ಟಿಎಂಸಿಗೆ ಸಿಬಿಐ ಮತ್ತು ಇಡಿ ಅಂದರೆ ಭಯ," ಎಂದು ಹೇಳಿದ್ದಾರೆ.

ಪ್ರಸ್ತಾವನೆಯನ್ನು ಮಂಡಿಸಿದ ಟಿಎಂಸಿ ಶಾಸಕ ಮತ್ತು ಸಚಿವ ತಪಸ್ ರಾಯ್, ನಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರ್ಷದ ಆರಂಭದಲ್ಲಿ ಆಡಳಿತ ಪಕ್ಷದ ಮೂವರು ಶಾಸಕರಾದ ಫಿರ್ಹಾದ್ ಹಕೀಮ್, ಮದನ್ ಮಿತ್ರ ಮತ್ತು ಸುಬ್ರತಾ ಮುಖರ್ಜಿ ಅವರನ್ನು ಕೇಂದ್ರ ತನಿಖಾ ದಳ(ಸಿಬಿಐ) ಬಂಧಿಸಿತ್ತು. ಆದರೆ ಯಾರೊಬ್ಬರೂ ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರ ಅನುಮತಿ ಕೇಳಲಿಲ್ಲ ಅಥವಾ ಅದರ ಬಗ್ಗೆ ಯಾವುದೇ ಮಾಹಿತಿ ನೀಡಲಿಲ್ಲ, ಎಂದು ಆರೋಪಿಸಿದ್ದಾರೆ. ಜಾರಿ ನಿರ್ದೇಶನಾಲಯ(ಇಡಿ) ಕೂಡ ಮೂವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.

RELATED TOPICS:
English summary :Privilege motion passed against CBI, ED for arresting TMC MLA

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...