ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಶಾಲೆಗಳಿಗೆ 2 ದಿನ ರಜೆ | ಜನತಾ ನ್ಯೂಸ್

18 Nov 2021
345

ಬೆಂಗಳೂರು : ರಾಜ್ಯದಲ್ಲಿ ಅಕಾಲಿಕ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರೆದಿದ್ದು, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಎಲ್ಲಾ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.

ನಗರದೆಲ್ಲೆಡೆ ಹಲವು ದಿನಗಳಿಂದ ಜಿಟಿಜಿಟಿ ಮಳೆ ಮುಂದುವರೆದಿದ್ದು, ದಿನವಿಡೀ ಚಳಿಯ ವಾತಾವರಣ ನಿರ್ಮಾಣಗೊಂಡಿದೆ. ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದ್ದು, ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿದ್ದಾರೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಕಾರಣ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆಯನ್ನು ಘೋಷಿಸುವ ಕುರಿತು ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ರಜೆ ಘೋಷಣೆ ಮಾಡಿದ ದಿನಗಳ ಶೈಕ್ಷಣಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ಷರತ್ತಿಗೊಳಪಟ್ಟು ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಶುಕ್ರವಾರ (ನ.19), ನವೆಂಬರ್‌ 20 ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನವೆಂಬರ್‌ 21ರಂದು ಶನಿವಾರ ಪೂರ್ಣದಿನ ತರಗತಿಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

RELATED TOPICS:
English summary :Bangalore

ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#
ಓಮಿಕ್ರಾನ್ ಕೋವಿಡ್ ರೂಪಾಂತರಿ ವೈರಸ್ : ನಿಯಂತ್ರಣ ಮತ್ತು ಸಕ್ರಿಯ ಕಣ್ಗಾವಲಿಗೆ ಕೇಂದ್ರದ ಸೂಚನೆ | ಜನತಾ ನ್ಯೂ&#
ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಕುಟುಂಬ ಆಧಾರಿತ ಪಕ್ಷಗಳು ಸಂವಿದಾನದ ವಿರುದ್ಧ - ಪರಿವಾರದ ಪಾರ್ಟಿ ವಿರುದ್ಧ ಪ್ರಧಾನಿ ಮೋದಿ ಗುಡುಗು | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2  ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಫ್ರಾನ್ಸ್ ನಿಂದ ಬಂದ 2 ಮಿರಾಜ್ ಯುದ್ಧ ವಿಮಾನ : ಭಾರತೀಯ ವಾಯುಪಡೆ ಬಲವರ್ಧನೆ | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಪ್ರತಿ ಮನೆ-ಮನೆಗೆ ಕೋವಿಡ್ ಲಸಿಕೆ ನೀಡುವ ಸಲುವಾಗಿ ಲಸಿಕೆ ವಾಹನಗಳಿಗೆ ಚಾಲನೆ: ಬಿಬಿಎಂಪಿ ಮುಖ್ಯ ಆಯುಕ್ತರು | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದ್ರೆ ಅಂಬರೀಶ್​ಗೂ ಸಿಕ್ಕಿದಂತೆ! | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಎಷ್ಟೇ ವರ್ಗಾವಣೆ ಮಾಡಿದ್ರೂ ಅದೇ ಜಾಗಕ್ಕೆ ಬಂದು ಕುಳಿತುಕೊಳ್ಳುತ್ತಿದ್ದ ಎಫ್​ಡಿಎ ಮಾಯಣ್ಣರ ಬಳಿ ಕೋಟಿ ಕೋಟಿ ಆಸ್ತಿ | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ನಮ್ಮ ಅಭ್ಯರ್ಥಿಗೇನು ತೊಂದರೆ ಇಲ್ಲ! | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ  | ಜನತಾ ನ್ಯೂ&#
ಕಲಬುರಗಿ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: ಪೈಪ್, ಬಕೆಟ್‍ನಲ್ಲಿ ಕಂತೆ ಕಂತೆ ಹಣ | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
26/11 ದಾಳಿಗೆ ಪ್ರತಿಕ್ರಿಯೆ ನೀಡದ ಕಾಂಗ್ರೆಸ್ ಸರ್ಕಾರದ ಬಗ್ಗೆ ಬರೆದ ಮನೀಶ್ ತಿವಾರಿ ವಿರುದ್ಧ ಶಿಸ್ತು ಕ್ರಮ? | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#
ಗದಗ ಕೃಷಿ ಇಲಾಖೆಯ ಜೆ.ಡಿ ಮನೆ ಮೇಲೆ ACB ದಾಳಿ: ₹ಕೋಟ್ಯಂತರ ಮೌಲ್ಯದ ನಗ-ನಗದು ಪತ್ತೆ | ಜನತಾ ನ್ಯೂ&#

ನ್ಯೂಸ್ MORE NEWS...