Wed,Apr24,2024
ಕನ್ನಡ / English

ಕೃಷಿ ಕಾನೂನು ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ - ಎಚ್‌ಡಿಕೆ | ಜನತಾ ನ್ಯೂಸ್

19 Nov 2021
2818

ಬೆಂಗಳೂರು : ಮೂರು ಕೃಷಿ ಕಾನೂನುಗಳ ರದ್ಧತಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ ಪ್ರತಿಪಕ್ಷಗಳ ಹರ್ಷ ಇಮ್ಮಡಿಗೊಂಡಿದೆ. ಒಂದೆಡೆ ಪ್ರಧಾನಿ ಮೋದಿ ನಡೆಯನ್ನು ಪ್ರತಿಪಕ್ಷಗಳು ಸ್ವಾಗತಿಸಿದ್ದರೂ, ಇನ್ನೊಂದೆಡೆ ಈ ನಿರ್ಧಾರದ ವಿರುದ್ಧ ಅಕ್ರೋಶ, ಸಂಶಯ ವ್ಯಕ್ತವಾಗುತ್ತಿದೆ.

ಜಿಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಪ್ರಧಾನಿ ಮೋದಿ ಅವರ ನಿರ್ಧಾರದ ಬಗ್ಗೆ ಹೇಳಿಕೆ ನೀಡಿದ್ದು, "ರೈತರ ಆಕ್ರೋಶಕ್ಕೆ ಗುರಿಯಾಗಿದ್ದ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ. ಕೊನೆಗೂ ಕೇಂದ್ರಕ್ಕೆ ಜ್ಞಾನೋದಯ ಆಗಿರುವುದು ಉತ್ತಮ ಬೆಳವಣಿಗೆ. ರೈತರ ಜತೆ ಚರ್ಚೆ ನಡೆಸದೇ ಈ ಕಾಯ್ದೆಗಳ ಏಕಪಕ್ಷೀಯ ಜಾರಿ & ಈಗ ಏಕಾಎಕಿ ರದ್ದತಿ ಅನೇಕ ಪ್ರಶ್ನೆ ಹುಟ್ಟುಹಾಕಿದೆ" ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.

"ನಿಜಕ್ಕೂ ಕರಾಳ ಕಾಯ್ದೆಗಳ ವಾಪಸಾತಿ ರೈತರ ವಿಜಯ & ಐತಿಹಾಸಿಕ. ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿಯ ಗಡಿಯಲ್ಲಿ ಅನ್ನಧಾತರು ಪ್ರತಿಭಟನೆ ನಡೆಸಿದರು. ಕೇಂದ್ರವು ಅವರ ಮೇಲೆ ಅಮಾನವೀಯ ಕ್ರೌರ್ಯ ನಡೆಸಿತು. ಅನೇಕ ಅಮೂಲ್ಯ ಜೀವಗಳ ನೆತ್ತರು ಹರಿಯಿತು. ಚಳಿ, ಮಳೆ, ಬಿಸಿಲೆನ್ನದೇ ರೈತರು ಹೋರಾಡಿದರು."

"ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಇದೆ. ಕೇಂದ್ರದ ನಿರ್ಧಾರ ಪ್ರಾಮಾಣಿಕವಾಗಿರಲಿ. ಕೇವಲ ಮತ ಫಸಲಿಗೆ ಮಾಡಿದ ಹೈಡ್ರಾಮಾ ಆಗದಿರಲಿ. ಚುನಾವಣೆ ಮುಗಿದ ಮೇಲೆ ಆ ಕರಾಳ ಕಾಯ್ದೆಗಳನ್ನು ಬೇರೆ ರೂಪದಲ್ಲಿ ಪುನಾ ಜಾರಿ ಮಾಡುವುದಿಲ್ಲ ಎಂದು ಪ್ರಧಾನಿಗಳು ತಮ್ಮ ಭಾಷಣದಲ್ಲಿ ರೈತರಿಗೆ ಮಾತು ಕೊಡಬೇಕಿತ್ತು."

"ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಸೇರಿದಂತೆ ದೇಶದ ನಾನಾ ಕಡೆ ರೈತರ ವಿರುದ್ಧ ನಡೆದಿರುವ ದೌರ್ಜನ್ಯಕ್ಕೆ ಪ್ರಧಾನಿಗಳು ತಮ್ಮ ಭಾಷಣದಲ್ಲಿ ಕ್ಷಮೆ ಯಾಚನೆ ಮಾಡಬೇಕಿತ್ತು. ಈಗಲಾದರೂ ರೈತರ ಮೇಲೆ ಹಿಂಸಾಚಾರ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು ಎಂಬುದು ನನ್ನ ಒತ್ತಾಯ", ಎಂದು ಎಚ್.ಡಿ.ಕೆ ಟ್ವೀಟ್ ಮಾಡಿದ್ದಾರೆ.

RELATED TOPICS:
English summary :Sudden repealing of farm law raises many questions - HDK

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...