Fri,Apr26,2024
ಕನ್ನಡ / English

ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ! | ಜನತಾ ನ್ಯೂಸ್

21 Nov 2021
2778

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಜನ ಸ್ವರಾಜ್ ಯಾತ್ರೆಯನ್ನು ಮಾಡುತ್ತಿದೆ. ರಾಜ್ಯದಲ್ಲಿ ಅಕಾಲಿಕ ಮಳೆಯಾಗಿ ರೈತರು ಸಂಕಷ್ಟದಲ್ಲಿರುವಾಗ ಈ ಯಾತ್ರೆ ಬೇಕಿತ್ತಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಸಚಿವರು, ಶಾಸಕರು ತಕ್ಷಣ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದ್ದಾರೆ.

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ.ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ.ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ.ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ,ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ.ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ.ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ?

ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನು ತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದಿದ್ದಾರೆ.

RELATED TOPICS:
English summary :Siddaramaiah

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...