Thu,Apr18,2024
ಕನ್ನಡ / English

ಬಾಲಕಿ ಮೇಲೆ ಗ್ಯಾಂಗ್​ರೇಪ್,​ ಕೊಲೆ: ನಾಲ್ವರು ಆರೋಪಿಗಳ ಬಂಧನ | ಜನತಾ ನ್ಯೂಸ್

24 Nov 2021
2116

ಮಂಗಳೂರು : ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ರವಿವಾರ ನಡೆದ 8 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಯ್ ಸಿಂಗ್(21), ಮುಕೇಶ್ ಸಿಂಗ್(20), ಮನೀಶ್ ತಿರ್ಕಿ(33) ಹಾಗೂ ಮುನೀಮ್ ಸಿಂಗ್ (20) ಬಂಧಿತ ಆರೋಪಿಗಳಾಗಿದ್ದಾರೆ.

ಜಯ್ ಸಿಂಗ್, ಮುಕೇಶ್ ಸಿಂಗ್ ಹಾಗೂ ಮನೀಶ್ ತಿರ್ಕಿ ಪರಾರಿಯಲ್ಲಿರುವ ಟೈಲ್ಸ್ ಫ್ಯಾಕ್ಟರಿಯ ಕೂಲಿ ಕಾರ್ಮಿಕರಾಗಿದ್ದರೆ, ಮುನೀಮ್ ಸಿಂಗ್ (20) ಪುತ್ತೂರಿನಲ್ಲಿ ಕೂಲಿ ಕಾರ್ಮಿಕನಾಗಿ ದುಡಿಯುತ್ತಿದ್ದ. ಇವರೆಲ್ಲ ಸ್ನೇಹಿತರಾಗಿದ್ದಾರೆ. ಈ ಪೈಕಿ ಮೂವರು ಮಧ್ಯ ಪ್ರದೇಶ ರಾಜ್ಯದ ಪನ್ನಾ ಜಿಲ್ಲೆಯ ನಿವಾಸಿಗಳಾದರೆ, ಓರ್ವ ಜಾರ್ಖಂಡ್ ರಾಜ್ಯದ ರಾಂಚಿ ನಿವಾಸಿ. ಆರೋಪಿಗಳಲ್ಲಿ ಇಬ್ಬರಿಗೆ 22 ವರ್ಷ, ಓರ್ವನಿಗೆ 21 ಹಾಗೂ ಇನ್ನೋರ್ವ 33 ವರ್ಷ ಎಂದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಪರಾರಿ ಎಂಬಲ್ಲಿಯ ರಾಜ್​ಟೈಲ್ಸ್ ಫ್ಯಾಕ್ಟರಿಯಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿರುವ ವಲಸೆ ಕಾರ್ಮಿಕರ ಪುತ್ರಿ, ಏಕಾಏಕಿ ನಾಪತ್ತೆಯಾಗಿದ್ದಾಳೆ‌. ಎಲ್ಲಾ ಕಡೆಗಳಲ್ಲಿ ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಸಂಜೆ ಹೊತ್ತಿಗೆ ಮಗು ಟೈಲ್ಸ್ ಫ್ಯಾಕ್ಟರಿಯ ಡ್ರೈನೇಜ್​ನಲ್ಲಿ ಪತ್ತೆಯಾಗಿದೆ. ತಕ್ಷಣ ಬಾಲಕಿಯನ್ನು ಮೇಲಕ್ಕೆತ್ತಿದರೂ ಆಕೆ ಅದಾಗಲೇ ಮೃತಪಟ್ಟಿದ್ದಳು.

ಆರೋಪಿಗಳು ನ.21ರಂದು ಮಧ್ಯಾಹ್ನ ಪರಾರಿಯ ಟೈಲ್ಸ್ ಫ್ಯಾಕ್ಟರಿಯ ಕಂಪೌಂಡ್ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಬಲವಂತದಿಂದ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿ ಬಳಿಕ ಬಾಲಕಿಯನ್ನು ಉಸಿರುಗಟ್ಟಿಸಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು.

ಈ ಪ್ರಕರಣವನ್ನು ಮಂಗಳೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದರು. ಪೊಲೀಸ್​ ಆಯುಕ್ತ ಶಶಿಕುಮಾರ್​ ಅವರು 4 ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ತನಿಖೆ ನಿರ್ದೇಶನ ನೀಡಿದ್ದರು. ಇದಾದ ಬಳಿಕ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತಿದ್ದ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ನಾಲ್ವರು ಆರೋಪಿಗಳ ಕೃತ್ಯ ಬಯಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

RELATED TOPICS:
English summary :Mangalore

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...