Sun,May19,2024
ಕನ್ನಡ / English

ಮತದಾರರ ವಿಶೇಷ ನೊಂದಣಿ ಅಭಿಯಾನ ಮೂರು ಭಾನುವಾರಗಳಲ್ಲಿ 13129 ಅರ್ಜಿಗಳು ಸ್ವೀಕೃತ: | ಜನತಾ ನ್ಯೂಸ್

26 Nov 2021
2921

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಹಮ್ಮಿಕೊಂಡಿರುವ ವಿಶೇಷ ನೊಂದಣಿ ಅಭಿಯಾನದಲ್ಲಿ, ಕಳೆದ ಮೂರು ಭಾನುವಾರಗಳಲ್ಲಿ 13,129 ಅರ್ಜಿಗಳು ಸ್ವೀಕೃತವಾಗಿರುತ್ತವೆ.

ಜಿಲ್ಲಾ ಚುನಾವಣಾಧಿಕಾರಿ-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 08.11.2021 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ: 08.12.2021 ರವರೆಗೆ ಅವಕಾಶ ಕಲ್ಪಿಸಲಾಗಿರುತ್ತದೆ. ಸದರಿ ಅವಕಾಶವನ್ನು ಸಾರ್ವಜನಿಕರಿಗೆ ಸದುಪಯೋಗಪಡಿಸಿಕೊಳ್ಳುವ ಸಲುವಾಗಿ ವಿಶೇಷ ನೊಂದಣಿ ಅಭಿಯಾನವನ್ನು ನವೆಂಬರ್ ಮಾಹೆಯ ದಿನಾಂಕ: 7, 14, 21, 28ರ ಭಾನುವಾರಗಳಂದು ಹಮ್ಮಿಕೊಳ್ಳಲಾಗಿರುತ್ತದೆ. ಕಳೆದ 3 ಅಭಿಯಾನಗಳಿಂದ 13,129 ಅರ್ಜಿಗಳು ಸ್ವೀಕೃತವಾಗಿರುತ್ತವೆ.

ಅದರಂತೆ, ದಿನಾಂಕ: 28.11.2021 ಭಾನುವಾರ ವಿಶೇಷ ನೊಂದಣಿ ಅಭಿಯಾನದ ಅಂತಿಮ ದಿನವಾಗಿದ್ದು, ಬೆಳಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರಗೆ, ಬಿಬಿಎಂಪಿಯ ಕಂದಾಯ ಅಧಿಕಾರಿಗಳು/ಸಹ ಕಂದಾಯ ಅಧಿಕಾರಿಗಳು/ವಾರ್ಡ್ ಕಛೇರಿಗಳು/ಮತಗಟ್ಟೆಗಳಲ್ಲಿ ಆಯೋಜಿಸಲಾಗಿರುತ್ತದೆ. ಮತದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.

ಭಾರತ ಚುನಾವಣಾ ಆಯೋಗದ ಆದೇಶ ಸಂಖ್ಯೆ: 23/2021/ERS-(Vol-II), ದಿನಾಂಕ: 27.08.2021 ನಿರ್ದೇಶನದಂತೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ-2022 ಕಾರ್ಯವು ಪ್ರಗತಿಯಲ್ಲಿದ್ದು, ಯಾವುದೇ ಅರ್ಹ ಮತದಾರರು ಮತದಾನದಿಂದ ಹೊರಗುಳಿಯಬಾರದೆಂಬುದು ವಿಶೇಷ ನೊಂದಣಿ ಅಭಿಯಾನದ ಧೈಯೋದ್ದೇಶವಾಗಿದೆ.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ಹೆಸರಿರುವ ಕುರಿತು https://electoralsearch.in ಪರಿಶೀಲಿಸಿಕೊಳ್ಳಬಹುದು ಹಾಗೂ ಹೆಸರು ನೊಂದವಣೆಗೆ https://www.nvsp.in ಮತ್ತು Voter helpline Mobile App ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದೆ.

RELATED TOPICS:
English summary :13129 application received in special registration campaign

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...