Sun,May19,2024
ಕನ್ನಡ / English

ಕೋವಿಡ್19 ನಿಯಂತ್ರಣಕ್ಕೆ ಕಟ್ಟೆಚ್ಚರ : ಗಡಿ, ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ - ಸಿಎಂ | ಜನತಾ ನ್ಯೂಸ್

28 Nov 2021
3008

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಶನಿವಾರ ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಬಿ.ಬಿ.ಎಂ.ಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಸೇರಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಸಚಿವರಾದ ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥನಾರಾಯಣ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರೋಗ್ಯ ಇಲಾಖೆ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್, ಆಯುಕ್ತ ರಂದೀಪ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು:

• ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ.

* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು

* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ.

* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು.

* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು

* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು.

• ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.

*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.

• ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು.

• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು

• ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.

* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

RELATED TOPICS:
English summary :Covid19 controlling precautions : Screening border, airport

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...