Sat,Apr20,2024
ಕನ್ನಡ / English

ಕೋವಿಡ್-19 ನಿಯಂತ್ರಣಕ್ಕೆ ಸಿಎಂ ಅಧ್ಯಕ್ಷತೆ ಮಹತ್ವದ ಸಭೆ : ರಾಜ್ಯಾದ್ಯಂತ 299 ಹೊಸ ಕೋವಿಡ್-19 ಪ್ರಕರಣ | ಜನತಾ ನ್ಯೂಸ್

08 Dec 2021
1913

ಬೆಂಗಳೂರು : ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಅಧಿಕಾರಿಗಳ ಸಭೆ ಜರುಗಿತು. ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯಕಾರ್ಯದರ್ಶಿ ಹಾಗು ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಕೋವಿಡ್-19 ಪ್ರಕರಣಗಳು ನಿನ್ನೆ ಬುಧವಾರ 299 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 215 ಸಂಖ್ಯೆ ಪ್ರಕರಣಗಳು ದಾಖಲಾಗಿದೆ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ 3 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಇಂದು ರಾಜ್ಯಾದ್ಯಂತ 4,49,511 ಲಸಿಕಾಕರಣ ಮಾಡಲಾಗಿದ್ದು, ರಾಜ್ಯದ ಒಟ್ಟು ಲಸಿಕಾಕರಣದ ಸಂಖ್ಯೆ 7,82,02,774ಕ್ಕೆ ಏರಿದೆ. ಇದರಲ್ಲಿ ಬಿಬಿಎಂಪಿ ವ್ಯಾಪಿಯಲ್ಲಿ 73,438 ಲಸಿಕಾಕರಣ ಮಾಡಲಾಗಿದೆ.

ಹಾಗೆಯೆ, ಪ್ರಕರಣಗಳ ಸಂಖ್ಯೆಯಲ್ಲಿ ತುಮಕೂರುನಲ್ಲಿ 4, ಬಳ್ಳಾರಿಯಲ್ಲಿ 3, ಮೈಸೂರು ನಲ್ಲಿ 11, ದಕ್ಷಿಣ ಕನ್ನಡದಲ್ಲಿ 14, ಹಾಸನದಲ್ಲಿ 6, ಮಂಡ್ಯದಲ್ಲಿ 2, ಉಡುಪಿಯಲ್ಲಿ 3, ಶಿವಮೊಗ್ಗದಲ್ಲಿ 4, ಬೆಳಗಾವಿಯಲ್ಲಿ 1, ಕುಲಬುರಗಿಯಲ್ಲಿ 1, ಚಿತ್ರದುರ್ಗದಲ್ಲಿ 0, ಧಾರವಾಡದಲ್ಲಿ 6, ವಿಜಯಪುರದಲ್ಲಿ 2, ಚಿಕ್ಕಬಳ್ಳಾಪುರದಲ್ಲಿ 1, ದಾವಣಗೆರೆಯಲ್ಲಿ 0, ಕೋಲಾರದಲ್ಲಿ 2, ಚಾಮರಾಜನಗರದಲ್ಲಿ 0, ಕೊಡಗುನಲ್ಲಿ 12, ಬೀದರ್ ನಲ್ಲಿ 0, ಕೊಪ್ಪಳದಲ್ಲಿ 0, ರಾಮನಗರದಲ್ಲಿ 0 ಹಾಗೂ ಉತ್ತರ ಕನ್ನಡ 5 ಪ್ರಕರಣ ದಾಖಲಾಗಿದೆ.

ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 29,98,699ಕ್ಕೆ ಏರಿಕೆಯಾಗಿವೆ. ಕಳೆದ 24 ಗಂಟೆಯಲ್ಲಿ 6 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ, ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಕೋವಿಡ್-19 ಚೇತರಿಕೆ ಪ್ರಕರಣಗಳಲ್ಲಿ, ಬೆಂಗಳೂರು ನಗರದಲ್ಲಿ 97 ಜನ ಕೋವಿಡ್‌-19 ನಿಂದ ಗುಣಮುಖರಾಗಿದ್ದು ಸೇರಿದಂತೆ ರಾಜ್ಯಾಧ್ಯಂತ ಇಂದು 260 ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 29,53,327 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ ರಾಜ್ಯಾದ್ಯಂತ ದಾಖಲಾದ 6 ಸಾವುಗಳಲ್ಲಿ, ಬೆಂಗಳೂರು ನಗರದಲ್ಲಿ 3 ಸಾವು ಸಂಭವಿಸಿದೆ ಹಾಗೂ ರಾಜ್ಯಾದ್ಯಂತ ಒಟ್ಟು ಕೋವಿಡ್ ಸಾವಿನ ಸಂಖ್ಯೆ 38,243 ಆಗಿದೆ.

RELATED TOPICS:
English summary :CM chaired meeting to contain Covid-19 : Statewide today 299 new case

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ

ನ್ಯೂಸ್ MORE NEWS...