Sun,May19,2024
ಕನ್ನಡ / English

ಪಂಜಾಬ್‌ನಲ್ಲಿ ಭತ್ತದ ತಳಿಗೆ ದೇವೇಗೌಡ ಹೆಸರು! | ಜನತಾ ನ್ಯೂಸ್

13 Dec 2021
2548

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಹೆಚ್‌.ಡಿ. ದೇವೇಗೌಡರಿಗೆ ಪಂಜಾಬ್​ನ ರೈತರು ಅತ್ಯುತ್ತಮ ಭತ್ತದ ತಳಿವೊಂದಕ್ಕೆ "ದೇವೇಗೌಡ" ಎಂದು ಹೆಸರಿಟ್ಟು ಅಭಿಮಾನ ಮೆರೆದಿದ್ದಾರೆ.

ಸದನದ ಒಳಗೆ ಮತ್ತು ಹೊರಗೆ ರೈತ ಸಮುದಾಯದ ಪರ ಹೆಚ್‌.ಡಿ ದೇವೇಗೌಡರಿಗೆ ಇರುವ ಬದ್ಧತೆಯ ಗೌರವಾರ್ಥವಾಗಿ ಅವರ ಹೆಸರನ್ನೇ ಇಟ್ಟಿದ್ದಾರಂತೆ. ಗೌಡರು ಶಾಸಕರಾಗಿ, ಸಂಸದರಾಗಿ ಯಾವತ್ತೂ ಸದನದ ಶಿಷ್ಟಾಚಾರ ಉಲ್ಲಂಘಿಸಿಲ್ಲ.

ಆದರೆ ರೈತರ ಹಿತಕ್ಕೆ ಬೆದರಿಕೆ ಬಂದಾಗ ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಈ ಸ್ವಯಂ ಪ್ರೇರಿತ ತತ್ವವನ್ನು ಉಲ್ಲಂಘಿಸಿದ್ದರು ಎಂದು ಪತ್ರಕರ್ತ ಸುಗತ ಶ್ರೀನಿವಾಸರಾಜು ತಮ್ಮ "ಫುರೋಸ್‌ ಇನ್‌ ಎ ಫೀಲ್ಡ್‌: ದಿ ಅನ್‌ಎಕ್ಸ್‌ಪ್ಲೋರ್ಡ್‌ ಲೈಫ್ ಆಫ್" (Furrows in a Field: The Unexplored Life of) ಪುಸ್ತಕದಲ್ಲಿ ಬರೆದಿದ್ದಾರೆ.

1991ರ ಜುಲೈ 31 ಮತ್ತು ಆಗಸ್ಟ್‌ 1ರ ಘಟನೆಯನ್ನು ಈ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಂದು ಮನಮೋಹನ್ ಸಿಂಗ್ ನೇತೃತ್ವದ ಮೊದಲ ಬಜೆಟ್ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಯುತ್ತಿತ್ತು.

ಅಂದು ಸದನದ ಬಾವಿಗಿಳಿದ ದೇವೇಗೌಡರು, ನಾನೊಬ್ಬ ರೈತ. ಭೂಮಿ ಉಳುವವನ ಮಗ. ರೈತರಿಗೆ ಸಬ್ಸಿಡಿಗಳನ್ನು ಕೊನೆಗೊಳಿಸುವ ನಿರ್ಧಾರವನ್ನು ಸರ್ಕಾರ ಈ ಕೂಡಲೇ ಹಿಂತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಸರ್ಕಾರದ ನಿರ್ಧಾರವನ್ನ ಒಪ್ಪುವುದಿಲ್ಲ. ಹಿಂಪಡೆಯುವವರೆಗೂ ಸದನದಿಂದ ಹೊರಗೆ ಹೋಗಲ್ಲ ಎಂದಯ ಪಟ್ಟು ಹಿಡಿದು ಕೂತಿದ್ದರ ಬಗ್ಗೆ ಪ್ರಸ್ತಾಪಿಸಲಾಗಿದೆ.

2002 ರಲ್ಲಿ, ಭಾರತದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ರೈತರ ಆತ್ಮಹತ್ಯೆಗಳು ವರದಿಯಾದಾಗ, ಗೌಡರು ಕರ್ನಾಟಕದಿಂದ ಸುಮಾರು 2,000 ರೈತರ ನಿಯೋಗವನ್ನು ರೈಲಿನಲ್ಲಿ ದೆಹಲಿಗೆ ಕರೆದೊಯ್ದು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಭೇಟಿ ಮಾಡಿದರು.

ಇದು ಅಭೂತಪೂರ್ವವಾಗಿದೆ. ವಿಶೇಷವಾಗಿ ಮಾಜಿ ಪ್ರಧಾನಿಯೊಬ್ಬರು ಈ ರೀತಿ ಪ್ರತಿಭಟಿಸಿದರು. ದೆಹಲಿಯ ಜನರು ದಿಗ್ಭ್ರಮೆಗೊಂಡರು, ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಪ್ರಕಟಿಸಿದ ಪುಸ್ತಕದಲ್ಲಿ ಹೇಳಲಾಗಿದೆ. ರೈತರ ಪರ ಗೌಡರಿಗಿದ್ದ ಬದ್ಧತೆಗಾಗಿ ಪಂಜಾಬ್‌ನ ರೈತರು ಅತ್ಯುತ್ತಮ ಭತ್ತದ ತಳಿಗಳಲ್ಲಿ ಒಂದಕ್ಕೆ ಗೌಡರ ಹೆಸರಿಟ್ಟಿದ್ದಾರೆ.

RELATED TOPICS:
English summary :Devegowda

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...