ಸ್ಕೂಟಿಗೆ ಕಾರು ಡಿಕ್ಕಿ: ವೈದ್ಯಕೀಯ ವಿದ್ಯಾರ್ಥಿನಿ ಸಾವು | ಜನತಾ ನ್ಯೂಸ್
ದಾವಣಗೆರೆ : ಕಾರು ಡಿಕ್ಕಿಯಾದ ಪರಿಣಾಮ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ.
ಪ್ರಿಯಾಂಕಾ (26) ಮೃತ ವಿದ್ಯಾರ್ಥಿನಿ. ಗುಜರಾತ್ ಮೂಲದ ಪ್ರಿಯಾಂಕ ಅವರು ದಾವಣಗೆರೆ ನಗರದ ಜೆಜೆಎಂ ಮೆಡಿಕಲ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯಾಗಿದ್ದರು.
ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವ ವೇಳೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದ್ದು, ಆಸ್ಪತ್ರೆಗೆ ಸಾಗಿಸುವಾಗ ಸಾವನಪ್ಪಿದ್ದಾಳೆ.
ಕೇರಳದ ಕೆಎಲ್ 02, BJ 8173 ನೋಂದಣಿ ಕಾರು ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Davanagere