ಎಂಇಎಸ್ ಅನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು - ಸಿದ್ದರಾಮಯ್ಯ | ಜನತಾ ನ್ಯೂಸ್

20 Dec 2021
602

ಬೆಂಗಳೂರು : ವಿಧಾನಸಭೆಯ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಬೆಳಗಾವಿಯಲ್ಲಿ ನಡೆಯುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಗುಂಡಾಗಿರಿಯ ಕುರಿತು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪ್ರತಿಪಕ್ಷದ ನಾಯ್ಕರ್ ಸಿದ್ದರಾಮಯ್ಯ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಸೌಹಾರ್ದತೆ ಹಾಳುಗೆಡವುದರಲ್ಲಿ ಎಂ.ಇ.ಎಸ್ ನವರು ನಿಸ್ಸೀಮರು, ಎಂದಿದ್ದು, ಎಂಇಎಸ್ ಅನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು, ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಏಕೀಕರಣ ಸಮಿತಿಯ ಪುಂಡಾಟಿಕೆಯನ್ನು ಕನ್ನಡಿಗರು ಇನ್ನು ಮುಂದೆ ಸಹಿಸಲು ಸಾಧ್ಯವಿಲ್ಲ. ಕನ್ನಡಿಗರ ಉದಾರತೆಯನ್ನು ಪದೇ ಪದೇ ದುರುಪಯೋಗಪಡಿಸಿಕೊಳ್ಳುವ ಎಂ.ಇ.ಎಸ್ ಅನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಬೇಕು, ಎಂದಿದ್ದಾರೆ ಸಿದ್ದರಾಮಯ್ಯ ಅವರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ವಿರೂಪಗೊಳಿಸಿದ ಮತ್ತು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಘಟನೆ ಸಂಬಂಧ ಖಂಡನಾ ನಿರ್ಣಯ ಅಂಗೀಕರಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಯನ್ನು ವಿರೂಪಗೊಳಿಸುವವರು ಕಿಡಿಗೇಡಿಗಳು, ಬುದ್ಧಿಗೇಡಿಗಳು ಮಾತ್ರ. ದೇಶದ ಇತಿಹಾಸ, ಮಹಾನ್ ವ್ಯಕ್ತಿಗಳ ತ್ಯಾಗ, ಬಲಿದಾನವನ್ನು ಗೌರವಿಸದ ಪುಂಡು, ಪೋಕರಿಗಳನ್ನು ಗಡಿಪಾರು ಮಾಡಬೇಕು. ಸೌಹಾರ್ದತೆ ಹಾಳುಗೆಡವುದರಲ್ಲಿ ಎಂ.ಇ.ಎಸ್ ನವರು ನಿಸ್ಸೀಮರು.

ಕನ್ನಡದ ನೆಲ, ಜಲ ಬೇಕು ಎನ್ನುವ ಎಂ.ಇ.ಎಸ್ ಪುಂಡರು ನಮ್ಮ ರಾಜ್ಯದಲ್ಲಿ ಇರಲು ಅರ್ಹರೇ ಅಲ್ಲ. ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ, ಜೈಲಿಗೆ ಕಳುಹಿಸಬೇಕು, ಎಂದು ಹೇಳಿದ್ದಾರೆ.

ಕನ್ನಡ ಧ್ವಜಕ್ಕೆ ಅವಮಾನ ಮಾಡಿರುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಮಾತುಕತೆ ನಡೆಸಬೇಕು. ಮುಂದೆ ಇಂತಹಾ ಘಟನೆಗಳು ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಬೇಕು, ಎಂದು ಸಾಮಾಜಿಕ ಮಾದ್ಯಮದಲ್ಲಿ ಪ್ರಕಟಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ಯಾವುದೇ ಒಂದು ಜಾತಿ, ಸಮಾಜಕ್ಕೆ ಸೀಮಿತವಾದವರಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗೈದ ಮಹಾನ್ ವ್ಯಕ್ತಿ. ಇಂಥವರ ಪ್ರತಿಮೆಯನ್ನು ವಿರೂಪಗೊಳಿಸೋದು ದೇಶ ದ್ರೋಹದ ಕೆಲಸವಾಗುತ್ತದೆ. ರಾಜ್ಯದಲ್ಲಿ ಗುಪ್ತಚರ ಇಲಾಖೆ ಜೀವಂತವಾಗಿಲ್ಲ, ಕಾನೂನು, ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇಡೀ ಸರ್ಕಾರವೇ ಬೆಳಗಾವಿಯಲ್ಲಿದ್ದರೂ ಎಂ.ಇ.ಎಸ್ ನವರು ಮಾರಕಾಸ್ತ್ರಗಳೊಂದಿಗೆ ಬಂದು ದಾಂಧಲೆ ಮಾಡುತ್ತಾರೆ ಎಂದರೆ ಏನರ್ಥ?, ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಇದಕ್ಕೂ ಮೊದಲು ಅವರು, ಬೆಳಗಾವಿಯ ಅನಗೊಳದಲ್ಲಿ ಮರುಪ್ರತಿಷ್ಠಾಪಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿನೀಡಿ ಗೌರವ ಸಲ್ಲಿಸಿದರು. ಎಂ.ಇ.ಎಸ್ ಪುಂಡರ ದಾಳಿಯಿಂದ ಮೊದಲಿನ ಪ್ರತಿಮೆ ಹಾನಿಗೊಳಗಾದ ಬಳಿಕ ಅದೇ ಸ್ಥಳದಲ್ಲಿ ನೂತನ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ.

RELATED TOPICS:
English summary :State govt to seriously think of banning MES - Siddaramaiah

ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ಪಂಜಾಬ್ ಸಿಎಂ ಸಂಬಂಧಿಕನ ಮನೆಯಿಂದ ಇಲ್ಲಿಯವರೆಗೆ 10 ಕೋಟಿ ರೂ. ಜಪ್ತಿ ಮಾಡಿದ ಇಡಿ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ತಂಗಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಅಣ್ಣ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಮಾದಕ ವಸ್ತು ಮಾರಾಟ: ಓರ್ವ ನೈಜೀರಿಯ ಪ್ರಜೆ ಸೀರಿ 4 ಆರೋಪಿಗಳ ಬಂಧನ | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ಸಿಎಂ ಮನೆ ಮುಂದೆ ಕಾನ್ಸ್​ಟೇಬಲ್​ಗಳಿಂದ ಗಾಂಜಾ ಮಾರಾಟ: ಇನ್ ಸ್ಪೆಕ್ಟರ್, ಎಎಸ್ಸೈ ಅಮಾನತು | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ನೈಟ್​ ಕರ್ಫ್ಯೂ ಹಾಕೋದಾಗಿದ್ರೆ ವ್ಯಾಕ್ಸಿನ್ ಯಾಕೆ ಬೇಕಿತ್ತು? | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಜಗತ್ತಲ್ಲಿ ಮಾಸ್ಕ್ ಹಾಕೊಂಡು ಊಟ ತಿನ್ನಬೇಕು ಅಂತ ಹೇಳೊ ಪಕ್ಷ ಕಾಂಗ್ರೆಸ್ - ಶಾಸಕ ರೇಣುಕಾಚಾರ್ಯ | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು   | ಜನತಾ ನ್ಯೂ&#
ಮದ್ವೆ ನಂತರವೂ ಸಂಬಂಧಿಯೊಂದಿಗೆ ಪ್ರೀತಿ, ಪ್ರೇಮಿಗಳಿಬ್ಬರು ನೇಣಿಗೆ ಶರಣು | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಕೋವಿಡ್ ನಿಯಂತ್ರಣಕ್ಕೆ 15-20 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಶ್ರೀರಂಗಪಟ್ಟಣದ ಮಸೀದಿ ಕೆಡವಿ ಹನುಮ ಮಂದಿರ ಕಟ್ತೀವಿ ಎಂದ ಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಆತ್ಮಗಳೊಂದಿಗೆ ಸಂಪರ್ಕ ಸಾದಿಸಲು ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕಿ ಕೊನೆಗೂ ಪತ್ತೆ! | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸಮನ್ವಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಡಿ.ಕೆ ಶಿವಕುಮಾರ್ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#
ಸರ್ಕಾರ ಪಾಪರ್ ಆಗಿದ್ದರೆ ಉಪನ್ಯಾಸಕರಿಗೆ ನಾನೇ ಸಂಬಳ ಕೊಡುತ್ತೀನಿ: ಹೆಚ್​ಡಿ ರೇವಣ್ಣ | ಜನತಾ ನ್ಯೂ&#

ನ್ಯೂಸ್ MORE NEWS...