ರಾಜ್ಯದ ನೆಲ, ಜಲ ಮತ್ತು ನುಡಿಯ ವಿಚಾರಗಳಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ, ಕರ್ನಾಟಕ ಬಂದ್ ಕರೆ ಬೇಡ! | ಜನತಾ ನ್ಯೂಸ್
ಬೆಂಗಳೂರು : ಕನ್ನಡಪರ ಸಂಘಟನೆಗಳು ನೀಡಿರುವ ಡಿ.31ರ ಕರ್ನಾಟಕ ಬಂದ್ ಕರೆಯನ್ನು ಹಿಂತೆಗೆದುಕೊಳ್ಳಬೇಕು ಎಂದು ಡಾ.ಸಿ.ಎನ್. ಅಶ್ವತ್ಥನಾರಾಯಣ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯದ ನೆಲ, ಜಲ ಮತ್ತು ನುಡಿಯ ವಿಚಾರಗಳಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಕನ್ನಡಪರ ಸಂಘಟನೆಗಳ ಸಲಹೆಗಳನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳಲಿದೆ" ಎಂದರು.
ಕರ್ನಾಟಕ ರಾಜ್ಯ ಬಂದ್ ಆಚರಣೆಯಿಂದ ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ. ಜತೆಗೆ ಆರ್ಥಿಕ ಚಟುವಟಿಕೆಗಳಿಗೆ ಧಕ್ಕೆಯಾಗಲಿದೆ. ಸರಕಾರವು ಕನ್ನಡಪರ ಸಂಘಟನೆಗಳ ಜತೆಗೆ ಮಾತುಕತೆಗೆ ಸಿದ್ಧವಿದೆ.
ಬೆಳಗಾವಿ ವಿಚಾರದಲ್ಲಿ ಉದ್ಧಟತನ ತೋರಿಸುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ವತಃ ಮುಖ್ಯಮಂತ್ರಿಗಳು ಸದನದಲ್ಲೇ ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ದುಷ್ಕೃತ್ಯ ನಡೆಸಿದವರನ್ನು ಈಗಾಗಲೇ ಬಂಧಿಸಿ, ಕಾನೂನು ಕ್ರಮ ಜರುಗಿಸಲಾಗುತ್ತಿದೆ. ಹೀಗಾಗಿ ಬಂದ್ ಕರೆ ನೀಡುವುದು ಸರಿಯಲ್ಲ ಎಂದು ಅವರು ಹೇಳಿದರು.