Sun,May19,2024
ಕನ್ನಡ / English

ಆತ್ಮಗಳೊಂದಿಗೆ ಸಂಪರ್ಕ-ಶಾಮನಿಸಂ ಕಲಿಯಲು ಮನೆಬಿಟ್ಟ ಯುವತಿ, ಹುಡುಕಿಕೊಡುವಂತೆ ಕುಟುಂಬದಿಂದ ಮನವಿ | ಜನತಾ ನ್ಯೂಸ್

30 Dec 2021
2701

ಬೆಂಗಳೂರು : ಬೆಂಗಳೂರಿನ 17 ವರ್ಷದ ಅನುಷ್ಕಾ ಎಂಬ ಯುವತಿಯ ನಾಪತ್ತೆ ಪ್ರಕರಣ ಇಡೀ ರಾಜ್ಯವನ್ನೇ ಆತಂಕಕ್ಕೀಡು ಮಾಡಿದೆ. 17 ವರ್ಷದ ಅನುಷ್ಕಾ ಎಂಬ ಯುವತಿ 2 ತಿಂಗಳ ಹಿಂದೆ ಬೆಂಗಳೂರಿನ ಮನೆಯಿಂದ ನಾಪತ್ತೆಯಾಗಿದ್ದಾರೆ.

ಕಳೆದ ಅಕ್ಟೋಬರ್​​ 31ರಿಂದ ಕಾಣೆಯಾಗಿರುವ ಬಾಲಕಿ ಅಧ್ಯಾತ್ಮಿಕ ಪ್ರಭಾವಕ್ಕೊಳಗಾಗಿ ಮನೆಯಿಂದ ಹೊರಟು ಹೋಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

17 ವರ್ಷದ ಅನುಷ್ಕಾ ಎರಡು ಜೊತೆ ಬಟ್ಟೆ, 2,500 ರೂಪಾಯಿಯೊಂದಿಗೆ ಬೆಂಗಳೂರಿನಲ್ಲಿರುವ ತನ್ನ ಮನೆ ಬಿಟ್ಟು ಹೊರಟು ಹೋಗಿದ್ದು, ಎರಡು ತಿಂಗಳಾದರೂ ಆಕೆಯ ಬಗ್ಗೆ ಯಾವುದೇ ರೀತಿಯ ಸುಳಿವು ಸಿಕ್ಕಿಲ್ಲ.

ಆತ್ಮಗಳೊಂದಿಗೆ ಸಂಪರ್ಕ ಸಾಧಿಸುವ ಸಂಪ್ರದಾಯ ಶಾಮನಿಸಂ(shamanism) ಬಗ್ಗೆ ಆನ್​ಲೈನ್​ನಲ್ಲಿ ಓದುತ್ತಿದ್ದ ಅನುಷ್ಕಾ ಅದರಿಂದ ತುಂಬಾ ಪ್ರಭಾವಿತಳಾಗಿದ್ದಳು ಎಂದು ತಿಳಿದು ಬಂದಿದ್ದು, ಅವಳ ಮೇಲೆ ಯಾರೋ ಪ್ರಭಾವ ಬೀರಿದ್ದಾರೆ. ಶಾಮನಿಸಂ ಕಲಿಯಬೇಕು ಎಂದು ನನ್ನ ಬಳಿ ಹೇಳಿಕೊಂಡಿದ್ದಳು ಎಂದು ತಂದೆ ಮಾಹಿತಿ ನೀಡಿದ್ದಾರೆ.

12ನೇ ತರಗತಿಯಲ್ಲಿ ಪಾಸ್​​ ಆಗಿದ್ದ ಅನುಷ್ಕಾ ಅಧ್ಯಾತ್ಮಿಕ ಜೀವನದ ಬಗ್ಗೆ ಸಹಾರಾ ರೋಸ್​, ಕಾಮ್ಯಾ ಬುಚ್​​ ಅವರಿಂದ ಪ್ರಭಾವಿತರಾಗಿದ್ದಳು ಎಂದು ತಿಳಿದು ಬಂದಿದೆ.

ಆಕೆ ಅಪ್ರಾಪ್ತಳಾಗಿದ್ದು, ಅವಳು ತನ್ನ ಸ್ವಂತ ನಿರ್ಣಯದ ನಿರ್ಧಾರವನ್ನು ತೆಗೆದುಕೊಳ್ಳುವ ಸ್ಥಿತಿಯಲ್ಲಿಲ್ಲದಿರಬಹುದು. ಅವಳನ್ನು ಯಾರೋ ಪ್ರಭಾವಿಸಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರು ಕೂಡ ತಲೆಕೆಡಿಸಿಕೊಂಡಿದ್ದು, ಪೊಲೀಸರು ಹಲವು ಸ್ಥಳಗಳ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಆಕೆಯ ಚಲನವಲನವನ್ನು ಸಿಸಿಟಿವಿ ಕ್ಯಾಮೆರಾ ಮೂಲಕ ವಿಶ್ಲೇಷಿಸಿದ್ದೇವೆ ಎಂದು ಬೆಂಗಳೂರು ಉತ್ತರದ ಉಪ ಪೊಲೀಸ್ ಆಯುಕ್ತ ವಿನಾಯಕ ಪಾಟೀಲ್ ಹೇಳಿದ್ದಾರೆ.

RELATED TOPICS:
English summary :Young woman missing from 2 months: request to find a girl

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...