ಟ್ರ್ಯಾಕ್ಟರ್ ಅಡಿ ಸಿಲುಕಿ ನವವಿವಾಹಿತ ದುರ್ಮರಣ! | ಜನತಾ ನ್ಯೂಸ್
ಚಿಕ್ಕಮಗಳೂರು: : ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನವವಿವಾಹಿತ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಳೇಕೋಟೆ ಬಳಿ ನಡೆದಿದೆ.
ಬಿದರಹಳ್ಳಿಯ ಹರೀಶ್ (28) ಮೃತ ಚಾಲಕ. ಇಳಿಜಾರಿನಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಟ್ರ್ಯಾಕ್ಟರ್ ಅಡಿ ಸಿಲುಕಿದ ಹರೀಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಕಳೆದ 45 ದಿನದ ಹಿಂದಷ್ಟೆ ಮದುವೆಯಾಗಿದ್ದ ಹರೀಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
RELATED TOPICS:
English summary :Accident in chikkamangaluru