ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. | ಜನತಾ ನ್ಯೂಸ್
ಬೆಂಗಳೂರು : ರಾಮನಗರದಲ್ಲಿ ಮುಖ್ಯಮಂತ್ರಿಗಳ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.
ಕಾಂಗ್ರೆಸ್ ಸಂಸ್ಕೃತಿ ಎಂದರೆ ಗೂಂಡಾ ಸಂಸ್ಕೃತಿ ಎಂಬುದಕ್ಕೆ ಇದಕ್ಕಿಂತ ಬೇರೆ ಉದಾಹರಣೆ ಬೇರೆ ಬೇಕಿಲ್ಲ. ಒಬ್ಬ ಸಂಸದರಿಗೆ ರಾಜ್ಯದ ಮುಖ್ಯಮಂತ್ರಿ ಇರುವ ವೇದಿಕೆಯಲ್ಲಿ ಹೇಗೆ ವರ್ತಿಸಬೇಕೆಂಬ ಪರಿಜ್ಞಾನವಿಲ್ಲದಿರುವುದು ವಿಪರ್ಯಾಸ. ಯಥಾ ರಾಜ ತಥಾ ಪ್ರಜಾ ಎಂಬಂತೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ವರ್ತಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ರಾಮನಗರ ಜಿಲ್ಲೆ ಎಂದರೆ "ಕನಕಪುರ ರಿಪಬ್ಲಿಕ್" ಎಂದು ಡಿಕೆ ಸಹೋದರರು ಭಾವಿಸಿದಂತಿದೆ. ನಿಮ್ಮ ಅಟ್ಟಹಾಸ, ದೌರ್ಜನ್ಯ, ರಾಜಕೀಯ ಮೇಲಾಟವನ್ನು ಎಲ್ಲ ಕಾಲಕ್ಕೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಸಾರ್ವಜನಿಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಹಾಗೂ ಎಂ ಎಲ್ಸಿ ಅವರ ವರ್ತನೆ ಅಕ್ಷಮ್ಯವಾದುದು ಎಂದು ಬಿಜೆಪಿ ಹೇಳಿದೆ.
ಬಂಡೆ ಕಲ್ಲುಗಳನ್ನೇ ನುಂಗಿ ನೀರು ಕುಡಿದ ಕನಕಪುರದ ರೌಡಿ ಸಹೋದರರಲ್ಲೊಬ್ಬರು ಮುಖ್ಯಮಂತ್ರಿಗಳಿದ್ದ ವೇದಿಕೆಯಲ್ಲೇ ಅಟ್ಟಹಾಸ ಮೆರೆದಿದ್ದಾರೆ, ಹಾಗಾದರೇ ಭೂಗತರಾಗಿ ಏನೇನು ಮಾಡಿರಬಹುದು!? ಕೊತ್ವಾಲನ ಶಿಷ್ಯರ ವಿರುದ್ಧ ಅರಣ್ಯ ಇಲಾಖೆಯ ಅಧಿಕಾರಿಗಳು ಸಲ್ಲಿಸಿದ್ದ ಕ್ರಿಮಿನಲ್ ಮೊಕದ್ದಮೆಗಳೇ ರೌಡಿ ಡಿಕೆಬ್ರದರ್ಸ್ ಗಳ ಇತಿಹಾಸ ಹೇಳುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ತೋಳ್ಬಲ, ಅಕ್ರಮ ಸಂಪತ್ತಿನ ಬಲದಿಂದ ಮೆರೆಯುತ್ತಿರುವ ಕನಕಾಸುರರು ಕರ್ನಾಟಕದ ಅಧಿಕಾರ ಹಿಡಿದು ಶಾಂತಿ ಕದಡುವ ಯತ್ನ ನಡೆಸುತ್ತಿದ್ದಾರೆ. ಇವರು ಅಧಿಕಾರಕ್ಕೆ ಬಂದರೆ ಕಂಡ ಕಂಡ ಖಾಲಿ ಜಾಗಕ್ಕೆ ಬೇಲಿ ಹಾಕುವುದರಲ್ಲಿ ಯಾವುದೇ ಅನುಮಾನವಿಲ್ಲ. ರಾಜ್ಯದ ಜನರು ಇಂತವರ ಕೈಗೆ ಎಂದಿಗೂ ಅಧಿಕಾರ ನೀಡಲಾರರು ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.