ಬಿಸಿಯೂಟ ಸೇವಿಸಿದ್ದ 60 ಕ್ಕೂ ಹೆಚ್ಚು ಮಕ್ಕಳ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | ಜನತಾ ನ್ಯೂಸ್
ಚಾಮರಾಜನಗರ : ಬಿಸಿಯೂಟ ಸೇವಿಸಿದ್ದ 60 ಮಕ್ಕಳ ಆರೋಗ್ಯದಲ್ಲಿ ಏರುಪೇರಾದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ವಡಕೆಹಳ್ಳ ಗ್ರಾಮದ ಉನ್ನತೀಕರಿಸಿದ ಶಾಲೆಯಲ್ಲಿ ನಡೆದಿದೆ.
ಹನೂರು ತಾಲೂಕಿನ ವಡಕೆಹಳ್ಳ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಶಾಲೆಯಲ್ಲಿ ಮಧ್ಯಾಹ್ನ ಎಂದಿನಂತೆ ಬಿಸಿಯೂಟ ಸೇವಿಸಿದ್ದಾರೆ. ಬಳಿಕ ಮಕ್ಕಳು ವಾಂತಿ ಮಾಡಿಕೊಂಡು ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ.
ಹಲ್ಲಿ ಬಿದ್ದಿದ್ದ ಊಟ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥಗೊಂಡಿದ್ದಾರೆ ಎಂದು ಬಿಇಒ ಸ್ವಾಮಿ ಮಾಹಿತಿ ನೀಡಿದ್ದಾರೆ. ಅಸ್ವಸ್ಥ ಮಕ್ಕಳಿಗೆ ಹನೂರು ತಾಲೂಕಿನ ಕೌದಳ್ಳಿ, ರಾಮಾಪುರ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
RELATED TOPICS:
English summary :Chamarajanagar : More than 60 students who consumed food have been affected by the health problems