Tue,May21,2024
ಕನ್ನಡ / English

ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ, ರಾಜಕಾರಣಿಗಳಿಗೆ ವಿನಾಯಿತಿ, ಉತ್ತಮ ಆಡಳಿತದ ಲಕ್ಷಣವಲ್ಲ - ಎಚ್.ಡಿ.ಕೆ | ಜನತಾ ನ್ಯೂಸ್

13 Jan 2022
2151

ಬೆಂಗಳೂರು : ಮೇಕೆದಾಟು ಪಾದಯಾತ್ರೆಯನ್ನು "ಓಮಿಕ್ರಾನ್ ಜಾತ್ರೆ"ಯನ್ನಾಗಿ ಪರಿವರ್ತಿಸಿದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ಸೋಂಕನ್ನು ನಿರ್ಲಕ್ಷಿಸಿದ ಸರಕಾರಕ್ಕೂ ಚಾಟಿ ಬೀಸಿದೆ. ಕೂಡಲೇ ಈ ಬಗ್ಗೆ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ನೀರಿನ ನೆಪದ ಈ ದೊಂಬರಾಟಕ್ಕೆ ಕೊನೆ ಹಾಡಬೇಕು, ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಕೋವಿಡ್ ರಕ್ಕಸ ರೂಪ ಪಡೆದು ವೇಗವಾಗಿ ಹರಡುತ್ತಿದೆ. ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಅನೇಕ ನಾಯಕರೇ ಪಾಸಿಟವ್ ಆಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ. ಸರಿಯಾಗಿ ಪರೀಕ್ಷೆ ನಡೆಸಿದರೆ ದೊಡ್ಡ ಸಂಖ್ಯೆಯ ಜನರು ಸೋಂಕಿತರಾಗಿರುವುದು ಬಯಲಾಗುತ್ತದೆ.

ನ್ಯಾಯಾಲಯದಿಂದ ಮತ್ತೆ ಛೀಮಾರಿ ಹಾಕಿಸಿಕೊಳ್ಳುವುದು ಬೇಡ. ಪರಿಸ್ಥಿತಿ ಕೈಮೀರಿದೆ. ಎಚ್ಚರ ತಪ್ಪಿದರೆ ಇರುವ ಆಸ್ಪತ್ರೆಗಳು, ವೈದ್ಯ ವ್ಯವಸ್ಥೆ ಸಾಲುವುದಿಲ್ಲ. ಮತ್ತೊಮ್ಮೆ ಸರಕಾರ ಮುಜುಗರಕ್ಕೆ ಒಳಗಾಗುವುದು ಸರಿಯಲ್ಲ.

ಕಳೆದ 4 ದಿನಗಳಿಂದ ಜಿಲ್ಲೆಗಳಿಂದ ಬಸ್ಸುಗಳಲ್ಲಿ ಜನರಿಗೆ ಹಣ ಕೊಟ್ಟು ಕರೆಸಿಕೊಂಡು ನಡೆಸುತ್ತಿರುವ ಈ ಜಾತ್ರೆಯಿಂದ ಮೇಕೆದಾಟು ಸಾಕಾರ ಅಸಾಧ್ಯ. ಇದು "ಸೋಂಕಿನ ಸಮಾರಾಧನೆ"ಯಷ್ಟೇ ಹೊರತು ಹೋರಾಟವಲ್ಲ. ಸರಕಾರ ಜಿಲ್ಲೆಗಳಿಂದ ಬರುವ ಜನರನ್ನು ಅಲ್ಲಲ್ಲಿಯೇ ತಡೆಯುವ ಕೆಲಸ ಮಾಡಬೇಕು.

ಮೇಕೆದಾಟು ಬಗ್ಗೆ ಏನೇನು ಮಾಡಲಾಗಿದೆ, ಎಂದು ಸರಕಾರ ಜಾಹೀರಾತು ನೀಡಿದೆ. ಬಿಜೆಪಿ-ಕಾಂಗ್ರೆಸ್ ಪಕ್ಷಗಳೂ ಜಾಹೀರಾತು ಕೊಟ್ಟುಕೊಂಡು ಸಮಜಾಯಿಷಿ ನೀಡಿವೆ. ಯಾವುದು ಸತ್ಯ? ಯಾವುದು ಸುಳ್ಳು? ಎನ್ನುವ ಲೆಕ್ಕವನ್ನು ನಾನು ಜನರ ಮುಂದೆ ಇಡುತ್ತೇನೆ.

1924ರಿಂದ ಕಾವೇರಿ ವಿಷಯದಲ್ಲಿ ಏನೆಲ್ಲಾ ನಡೆಯಿತು? ರಾಜ್ಯಕ್ಕೆಷ್ಟು ಅನ್ಯಾಯ ಆಯಿತು ಎಂಬುದನ್ನು ಮುಂದೆ ನಾನು ವಿವರವಾಗಿ ಚರ್ಚೆ ಮಾಡುತ್ತೇನೆ.

ಕಾಂಗ್ರೆಸ್ ಪಾದಯಾತ್ರೆಯಿಂದ ನಮ್ಮ ಪಕ್ಷಕ್ಕೇನು ಆತಂಕವಿಲ್ಲ. ಆದರೆ ಜನ ಆರೋಗ್ಯದ ಆತಂಕದಲ್ಲಿದ್ದಾರೆ. ಹಾಗಂತ, ಇವರ ಯಾತ್ರೆ ಬಗ್ಗೆ ಅಥವಾ ನಾಡಿನ ಪರ ದನಿಯೆತ್ತುವ ಬಗ್ಗೆ ನನ್ನ ತಕರಾರಿಲ್ಲ. ಆದರೆ, ಕೋವಿಡ್ ಅಟ್ಟಹಾಸದ ಹೊತ್ತಿನಲ್ಲಿ ಇದು ಖಂಡಿತಾ ಬೇಕಿರಲಿಲ್ಲ.

ಗಾಂಧೀಜಿ ಅವರ ಪಾದಯಾತ್ರೆ ಬಗ್ಗೆ ಓದಿದ್ದೇನೆ. ವಿನೋಬಾ ಭಾವೆ ಅವರ ಪಾದಯಾತ್ರೆ ಬಗ್ಗೆ ಅರಿತಿದ್ದೇನೆ. ದೇವೇಗೌಡರ ಪಾದಯಾತ್ರೆಯನ್ನು ಕಣ್ಣಾರೆ ಕಂಡಿದ್ದೇನೆ. ಆದರೆ, ಇಂಥ "ಹೈಟೆಕ್ ಪಾದಯಾತ್ರೆ"ಯನ್ನು ನೋಡಿರಲಿಲ್ಲ. ಇಂಥ ದೊಂಬರಾಟದಿಂದ ಕಾನೂನಿನ ವ್ಯಾಪ್ತಿಯಲ್ಲಿರುವ ಮೇಕೆದಾಟು ಯೋಜನೆ ಜಾರಿ ಸಾಧ್ಯವಿಲ್ಲ.

ಚುನಾವಣೆ ಹತ್ತಿರದಲ್ಲಿದೆ. ಕಾಂಗ್ರೆಸ್ ಸಂಘಟನೆ ಮಾಡಿಕೊಳ್ಳಲಿ. ಕೋವಿಡ್ ಇಳಿಮುಖವಾದ ನಂತರ ಅದನ್ನು ಮಾಡಲಿ. ಅದನ್ನು ಬಿಟ್ಟು ಜನರ ಜೀವದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ. ಕಾಂಗ್ರೆಸ್ ಒಂದು ಜವಾಬ್ದಾರಿ ಪಕ್ಷವಾಗಿದ್ದರೆ ತಕ್ಷಣ ಪಾದಯಾತ್ರೆ ನಿಲ್ಲಿಸಲಿ. ಗಂಡಸ್ತನ ತೋರಿಸುವುದಕ್ಕೆ ಹೋಗಿ "ಮೇಕೆದಾಟನ್ನು ಮಸಣ" ಮಾಡುವುದು ಬೇಡ.

ಕಳೆದ 4 ದಿನಗಳಿಂದ ಸರಕಾರ ತೋರಿದ ಉದಾರತೆ ಸಾಕು. ಇನ್ನೂ ಔದಾರ್ಯ ತೋರಿದರೆ ರಾಜ್ಯದ ಅವನತಿಗೆ ದಾರಿಯಾದೀತು. ಕೋವಿಡ್ ನಿಯಮ ಪಾಲಿಸುವಂತೆ ಜನರಿಗೆ ಹಿಂಸೆ ಕೊಟ್ಟು, ರಾಜಕಾರಣಿಗಳಿಗೆ ವಿನಾಯಿತಿ ಕೊಡುವುದು ಉತ್ತಮ ಆಡಳಿತದ ಲಕ್ಷಣವಲ್ಲ. ಸರಕಾರ ಕೆಚ್ಚೆದೆಯ ಕ್ರಮ ಕೈಗೊಳ್ಳಬೇಕು, ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

RELATED TOPICS:
English summary :Violence against the people not following Covid Law and exemption from politicians is not a good governance

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...