ರಾಜ್ಯದಲ್ಲಿ ಲಾಕ್ಡೌನ್ ಇಲ್ಲ, ಶುಕ್ರವಾರದ ಬಳಿಕ ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ನಿರ್ಧಾರ! | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಲೆಯ ತೀವ್ರತೆ ಹೆಚ್ಚಾಗಿದ್ದು, ಜನವರಿ 25ಕ್ಕೆ ಉತ್ತುಂಗಕ್ಕೇರಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಜಾರಿ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ರಾತ್ರಿ ನಿಷೇಧಾಜ್ಞೆ, ವಾರಾಂತ್ಯದ ನಿಷೇಧಾಜ್ಞೆಯಲ್ಲಿ ರಿಯಾಯಿತಿ ನೀಡುವ ಕುರಿತು ಶುಕ್ರವಾರ ನಿರ್ಧರಿಸುವ ಬಗ್ಗೆ ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತಂತೆ ಸಿಎಂ ನೇತೃತ್ವದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದರು. ಕೊರೊನಾ ತಪಾಸಣೆ ಮಾಡುವುದನ್ನು ಹೆಚ್ಚು ಮಾಡುತ್ತಿದ್ದೇವೆ, ಇಡೀ ದೇಶದಲ್ಲಿ ನಾವೇ ಹೆಚ್ಚು ತಪಾಸಣೆ ಮಾಡುತ್ತಿದ್ದೇವೆ, ಅಷ್ಟು ಪ್ರಮಾಣದಲ್ಲಿ ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ಸಮಿತಿಯವರು ಹೇಳಿದ್ದಾರೆ. ಹಾಗಾಗಿ ಇನ್ಮುಂದೆ ತಪಾಸಣೆ ಪ್ರಮಾಣ ಕಡಿಮೆ ಮಾಡಲಾಗುತ್ತದೆ ಎಂದರು.
ಈಗಿರುವ ಅಂದಾಜಿನ ಪ್ರಕಾರ ಜನವರಿ 25ರ ವೇಳೆಗೆ ಉತ್ತುಂಗಕ್ಕೇರಲಿದೆ, ವಾರಾಂತ್ಯ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಬಗ್ಗೆಯೂ ಚರ್ಚೆ ನಡೆದಿದೆ, ಎಲ್ಲಾ ತಜ್ಞರ ಅಭಿಪ್ರಾಯದ ನಂತ್ರ ಶುಕ್ರವಾರ ಸಭೆಯನ್ನು ಸೇರಿ ವೀಕೆಂಡ್, ನೈಟ್ ಕರ್ಪ್ಯೂ ವಿಸ್ತರಣೆ, ಅಂತ್ಯದ ಬಗ್ಗೆ ನಿರ್ಧಾರ ಕೈಗೊಳ್ಳವ ಬಗ್ಗೆ ಸಿಎಂ ಸೂಚಿಸಿದ್ದಾರೆ.