ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?: ಹೆಚ್ ಡಿ ಕುಮಾರಸ್ವಾಮಿ | ಜನತಾ ನ್ಯೂಸ್

21 Feb 2022
511

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಭಜರಂಗದಳ ಯುವಕನ ಕೊಲೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ ಅಮಾನವೀಯ. ಆ ಯುವಕನ ಕುಟುಂಬಕ್ಕೆ ನನ್ನ ಸಾಂತ್ವನಗಳು. ಈ ಕೊಲೆಯ ಹಿಂದೆ ಯಾರೇ ಇದ್ದರೂ ಅವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಇಂಥ ಘಟನೆಗಳು ಪದೇ ಪದೆ ನಡೆಯುತ್ತವೆ. ಶಾಂತಿಯನ್ನು ಕದಡುವುದೇ ಅವರ ಕೆಲಸ, ಇಂಥ ಘಟನೆಗಳ ಬೆಂಕಿಯಲ್ಲಿ ರಾಷ್ಟ್ರೀಯ ಪಕ್ಷಗಳು ಚಳಿ ಕಾಯಿಸಿಕೊಳ್ಳುತ್ತವೆ ಎಂದು ನಾನು ಮೊದಲೇ ಹೇಳಿದ್ದೆ. ಈಗ ರಾಜ್ಯದಲ್ಲಿ ಅಂತವೇ ಕೆಟ್ಟ, ಭಯಾನಕ ಘಟನೆಗಳು ನಡೆಯುತ್ತಿವೆ.

ಮುಂದಿನ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಇಂಥ ಘಟನೆಗಳು ನಡೆಯುತ್ತಿವೆ ಎನ್ನುವುದು ನನ್ನ ಅನುಮಾನ. ರಾಷ್ಟ್ರೀಯ ಪಕ್ಷಗಳಿಗೆ ಅಭಿವೃದ್ಧಿ ವಿಚಾರ ಇಟ್ಟುಕೊಂಡು ಜನರ ಬಳಿಗೆ ಹೋಗಲು ವಿಷಯ ಇಲ್ಲ. ಕೇವಲ ಭಾವನಾತ್ಮಕ ಅಂಶಗಳ ಮೂಲಕ "ಹಿಂಸಾ ರಾಜಕಾರಣ"ವನ್ನು ಮಾಡಲು ಎರಡೂ ಪಕ್ಷಗಳು ಹೊರಟಿವೆ ಎಂದು ಟೀಕಿಸಿದ್ದಾರೆ.

ಹತ್ಯೆಗೀಡಾದ ಯುವಕನಿಗೆ ಮೊದಲೇ ಜೀವ ಬೆದರಿಕೆ ಇತ್ತೆಂದು, ಪೊಲೀಸರಿಗೆ ದೂರು ಕೊಡಲಾಗಿತ್ತು ಎಂದು ಹೇಳುತ್ತಿದ್ದಾರೆ. ಹಾಗಾದರೆ ಆ ಯುವಕನಿಗೆ ರಕ್ಷಣೆ ಯಾಕೆ ಕೊಡಲಿಲ್ಲ. ಇದಕ್ಕೆ ಉತ್ತರ ಬೇಕಿದೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳು 2023ರ ಚುನಾವಣೆಗೆ ಸದನದಲ್ಲಿ ಗದ್ದಲ ಎಬ್ಬಿಸುವ ಮೂಲಕ ಟ್ರೈಲರ್ ಬಿಟ್ಟಿದ್ದು, ಸಿನಿಮಾ ಬಾಕಿ ಇದೆ ಎಂದಿದ್ದೆ ಎಂದು ಟೀಕಿಸಿದ್ದಾರೆ.

ಶಿವಮೊಗ್ಗ ಘಟನೆಯ ಮೂಲಕ ರಾಷ್ಟ್ರೀಯ ಪಕ್ಷಗಳು ಹಿಂಸಾ ರಾಜಕಾರಣದ ಪೂರ್ಣ ಸಿನಿಮಾ ತೋರಿಸಲು ಹೊರಟಿದ್ದಾರೆ. ಜನರ ಸೂಕ್ಷ್ಮ ಭಾವನೆಗಳು ಹಾಗೂ ಸಮಾಜದ ಶಾಂತಿಯನ್ನು ಅಪಾಯಕ್ಕೆ ಒಡ್ಡಿ ಬೇಳೆ ಬೇಯಿಸಿಕೊಳ್ಳುತ್ತಿರುವ ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಕ್ಷಮೆಯೇ ಇಲ್ಲ.

ಈಗ ಒಂದು ಅಮೂಲ್ಯ ಪ್ರಾಣ ಹೋಗಿದೆ. ಅದಕ್ಕೆ ಯಾರು ಹೊಣೆ? ರಾಜಕಾರಣಿಗಳು ಮೂರು ದಿನ ಹೋದ ಪ್ರಾಣದ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸಿ, ಹತ್ತು ಲಕ್ಷ ಪರಿಹಾರ ಕೊಟ್ಟರೆ ಸಾಕೇ?. ಇಂತಹ ಹಿಂಸಾ ಪ್ರವೃತ್ತಿಗೆ ಕೊನೆ ಎಂದು? ಎಂದು ಪ್ರಶ್ನಿಸಿದ್ದಾರೆ.

RELATED TOPICS:
English summary :National Parties Go to Politics of Violence: H D Kumaraswamy

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...