ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಬಂಧನ : ಅಪಹರಣ ಎಂದು ಪತ್ನಿ ಆರೋಪ | ಜನತಾ ನ್ಯೂಸ್

22 Feb 2022
620

ಬೆಂಗಳೂರು : ನಟ ಮತ್ತು ಸಾಮಾಜಿಕ ಕಾರ್ಯಕರ್ತ ಚೇತನ್ ಕುಮಾರ್ ಅವರ ಟ್ವೀಟ್ಗಾಗಿ (ಹಿಜಾಬ್ ಮತ್ತು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮೇಲೆ) ಬಂಧಿಸಲಾಗಿದೆ. ಶೇಷಾದ್ರಿಪುರಂ ಪೋಲಿಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಲಾಗಿದೆ. (ಸಂ. 40/2022 ಯು/ಎಸ್ 505(2) & 504 ಐಪಿಸಿ). ಕುಮಾರ್ ಅವರನ್ನು ಜುರಿಡಿಕ್ಷನಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು, ಎಂದು ಕೇಂದ್ರ ಡಿಸಿಪಿ ತಿಳಿಸಿದ್ದಾರೆ.

ಚೇತನ್‌ರನ್ನು ಪೊಲೀಸರು ಯಾವುದೇ ಮಾಹಿತಿ ನೀಡದೆ, ನೋಟಿಸ್ ನೀಡದೇ ಅಪಹರಿಸಿದ್ದಾರೆ, ಎಂದು ಚೇತನ್ ಅವರ ಪತ್ನಿ ಮೇಘ ಆರೋಪಿಸಿದ್ದರು.

ಬೆಂಗಳೂರಿನ ಶೇ‍ಷಾದ್ರಿಪುರಂ ಪೊಲೀಸ್ ಠಾಣೆ ಎದುರು ಫೇಸ್‌ಬುಕ್‌ ಲೈವ್‌ ವೀಡಿಯೊದಲ್ಲಿ ಅಕ್ರೋಶ ವ್ಯಕ್ತಪಡಿಸಿದ್ದ ಮೇಘ ಅವರು, "ಚೇತನ್‌ರವರ ಫೋನ್ ಸ್ವಿಚ್-ಆಫ್ ಆಗಿದೆ. ಅವರ ಗನ್ ಮ್ಯಾನ್ ಫೋನ್ ಕೂಡ ಸಿಗುತ್ತಿಲ್ಲ. ಇಂದು ಮಧ್ಯಾಹ್ನ 3 ಗಂಟೆಯಿಂದ ನನ್ನ ಪತಿ ಚೇತನ್ ಕಾಣುತ್ತಿಲ್ಲ, ನಮ್ಮ ಮನೆಯಲ್ಲಿ ಕೆಲಸ ಮಾಡುವವರು ಪೊಲೀಸರು ಕರೆದುಕೊಂಡು ಹೋದರು ಎಂದು ಹೇಳುತ್ತಿದ್ದಾರೆ. ಆದರೆ ಈ ಕುರಿತು ಪೊಲೀಸರು ಯಾವುದೇ ಮಾಹಿತಿ ನೀಡುತ್ತಿಲ್ಲ. ಈ ದೇಶದ ಯಾವುದೇ ಪ್ರಜೆಯನ್ನು ವಿಚಾರಣೆಗಾಗಿ ಕರೆದೊಯ್ಯಬೇಕಾದರೆ ಅವರ ಕುಟುಂಬ ಸದಸ್ಯರಿಗೆ ತಿಳಿಸಬೇಕು, ಮೊದಲೇ ನೋಟಿಸ್ ನೀಡಬೇಕು, ಅವರಿಗೆ ನ್ಯಾಯಾಂಗ ಸಹಾಯ ಪಡೆಯುವ ಹಕ್ಕು ಇದೆ. ಇದನ್ನು ಉಲ್ಲಂಘಿಸಿರುವ ಪೊಲೀಸರು ಉದ್ದೇಶಪೂರ್ವಕವಾಗಿ ಚೇತನ್‌ಗೆ ಕಿರುಕುಳ ನೀಡುತ್ತಿದ್ದಾರೆ. ಇದು ಪೊಲೀಸರು ಮಾಡಿರುವ ಅಪಹರಣವಾಗಿದೆ", ಎಂದು ಚೇತನ್ ಅವರ ಪತ್ನಿ ಆರೋಪಿಸಿದ್ದಾರೆ.

RELATED TOPICS:
English summary : Actor and social worker Chetan Kumar arrested : Wife says kidnapped

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...