ಮದ್ಯಪ್ರಿಯರಿಗೆ ಗುಡ್ ನ್ಯೂಸ್, ಮದ್ಯದ ದರ ಹೆಚ್ಚಳವಿಲ್ಲ: ಸಚಿವ ಕೆ.ಗೋಪಾಲಯ್ಯ | ಜನತಾ ನ್ಯೂಸ್
ಬೆಂಗಳೂರು : ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ ಕೆಲವು ಸಲಹೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
RELATED TOPICS:
English summary :Good news for alcoholics, no increase in alcohol rates - Minister K Gopalya