ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ | ಜನತಾ ನ್ಯೂಸ್
ಬೆಂಗಳೂರು : ರಷ್ಯಾ ಹಾಗೂ ಉಕ್ರೇನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಉಕ್ರೇನ್ನಲ್ಲಿ ಕನ್ನಡಿಗರು ಮತ್ತು ವಿಶೇಷವಾಗಿ ವಿದ್ಯಾರ್ಥಿಗಳು ಸಿಲುಕಿರುವ ಸುದ್ದಿ ವರದಿಗಳು ತುಂಬಾ ಕಳವಳಕಾರಿಯಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಅವರ ಕುಟುಂಬದವರನ್ನು ಸಂಪರ್ಕಿಸಿ ಅವರಲ್ಲಿ ಭರವಸೆ ತುಂಬಬೇಕು. ಯುಕ್ರೇನ್-ರಷ್ಯಾ ಸಂಘರ್ಷ ಅಂತಾರಾಷ್ಟ್ರೀಯ ವಿದ್ಯಮಾನವಾಗಿರುವ ಕಾರಣ ಕೇಂದ್ರ ಸರ್ಕಾರದ ನೆರವು-ಸಹಕಾರ ಅಗತ್ಯವಾದರೂ ಅವರ ಮೇಲಷ್ಟೇ ಜವಾಬ್ದಾರಿವಹಿಸಿ ಬಿಟ್ಟುಬಿಡಬಾರದು ಎಂದು ಸಲಹೆ ನೀಡಿದ್ದಾರೆ.
ಈ ನಿಟ್ಟಿನಲ್ಲಿ ಅವರ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾನು ಒತ್ತಾಯಿಸುತ್ತೇನೆ ಅವರ ಸುರಕ್ಷಿತ ವಾಪಸಾತಿಗೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.