ಕಾಂಗ್ರೆಸ್ ಪಕ್ಷ ದೊಂಬರಾಟ ಮಾಡುತ್ತಿದೆ, ನೀರಿಗೂ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ! | ಜನತಾ ನ್ಯೂಸ್

28 Feb 2022
591

ಬೆಂಗಳೂರು : ಕಾಂಗ್ರೆಸ್ ಪಕ್ಷ ದೊಂಬರಾಟ ಮಾಡುತ್ತಿದೆ. ನೀರಿಗೂ ಕಾಂಗ್ರೆಸ್ ರಾಜಕೀಯ ಲೇಪ ಹಚ್ಚುತ್ತಿದೆ, ಕುಡಿಯುವ ನೀರಿಗೂ ರಾಜಕೀಯ ಬಣ್ಣ ಹಚ್ಚುತ್ತಿದೆ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ನಾಡಿನ ನೆಲ, ಜಲ, ಭಾಷೆ ಬಂದಾಗ ಎಲ್ಲರೂ ಒಂದಾಗುತ್ತಾರೆ. ಆದರೆ ಕಾಂಗ್ರೆಸ್ ಸುಮ್ಮನೆ ರಾಜಕೀಯ ಮಾಡ್ತಿದೆ. 75 ವರ್ಷಗಳಲ್ಲಿ ಕಾಂಗ್ರೆಸ್ ಮೇಕೆದಾಟಿಗೆ ಏನೂ ಮಾಡಿಲ್ಲ. ಡಿಪಿಆರ್ ಕೂಡಾ ಅವರು ಮಾಡಿಲ್ಲ. ಹೀಗಾಗಿ ಕಾಂಗ್ರೆಸ್ ಪಾದಯಾತ್ರೆಯನ್ನು ನಾನು ಖಂಡಿಸುತ್ತೇನೆ. ಮೇಕೆದಾಟು ಅನುಷ್ಠಾನ ಮಾಡಲು ನಮ್ಮ ರಾಜ್ಯ ಮತ್ತು ಕೇಂದ್ರ ಬದ್ದವಾಗಿದೆ ಎಂದರು.

ಮೇಕೆದಾಟು ಯೋಜನೆಯನ್ನು ಬಿಜೆಪಿ ಸರಕಾರ ಸಮರೋಪಾದಿಯಲ್ಲಿ ಕೈಗೆತ್ತಿಕೊಂಡಿದೆ. ಇದನ್ನು ಕಂಡು ಶಿವಕುಮಾರ್ ಅವರಿಗೆ ತಮ್ಮ ಭವಿಷ್ಯದ ಬಗ್ಗೆ ಆತಂಕವಾಗಿದೆ. ಅವರ ಪಾದಯಾತ್ರೆ ಕೇವಲ ವಾಕಿಂಗ್ ಆಗಬಹುದೇ ಹೊರತು ಜನರಾರೂ ಅವರೊಂದಿಗೆ ಹೋಗುತ್ತಿಲ್ಲ. ಕಾಣಿಸಿಕೊಳ್ಳುತ್ತಿರುವವರು ಕೇವಲ ಭಟ್ಟಂಗಿಗಳಷ್ಟೆ ಎಂದು ಅವರು ಹರಿಹಾಯ್ದರು.

ಪಾದಯಾತ್ರೆ ಮಲ್ಲೇಶ್ವರಂಗೆ ಬರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಿಗೆ ಬೇಕಾದರೂ ಪಾದಯಾತ್ರೆ ಬರಲಿ. ನಮ್ಮ ಕ್ಷೇತ್ರಕ್ಕೆ ಬರೋದಕ್ಕೆ ಯಾವುದೇ ಅಭ್ಯಂತರ ಇಲ್ಲ. ನೀವು ನಮ್ಮ ಕ್ಷೇತ್ರದಕ್ಕೆ ಬಂದ್ರೆ ನಮಗೆ ಜನ ಆಶೀರ್ವಾದ. ಪಾದಯಾತ್ರೆ ಬರಲಿ ನಮಗೇನೂ ಅಭ್ಯಂತರ ಇಲ್ಲ ಎಂದರು.

ಪರಿಜ್ಞಾನ ಇಲ್ಲದೆ ಈ ಪಾದಯಾತ್ರೆ ಮಾಡ್ತಿದ್ದಾರೆ. ನಾಟಕ ಮಾಡಿಕೊಂಡು ಪಾದಯಾತ್ರೆ ಮಾಡ್ತಿದ್ದಾರೆ. ವ್ಯಾಪಾರ, ಲಾಭ, ನಷ್ಟ ನೋಡೋದು ಡಿಕೆಶಿವಕುಮಾರ್ ಗುಣ. ತಾನು ಹೇಗೆ ಸಿಎಂ ಆಗಬೇಕು ಅಂತ ಡಿಕೆ ಪ್ಲ್ಯಾನ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ಟಕ್ಕರ್ ಹೊಡೆಯಲು ಈ ಪಾದಯಾತ್ರೆ ಮಾಡುತ್ತಿದ್ದಾರೆ ಅಂತ ವಾಗ್ದಾಳಿ ನಡೆಸಿದರು.

ತಮಿಳುನಾಡಿನಲ್ಲಿ ಅವರದ್ದೇ ಸರ್ಕಾರ ಇದೆ. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೆ ಬಂದು ಇದನ್ನು ಮಾಡಲು ಸಾಧ್ಯವೇ ಇಲ್ಲ. ಇವರ ಜನ್ಮದಲ್ಲಿ ಮೇಕೆದಾಟು ಕಾಂಗ್ರೆಸ್ ಜಾರಿ ಮಾಡಲ್ಲ. ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ರಾಮನಗರ ಅಭಿವೃದ್ಧಿ ಮಾಡಿಲ್ಲ. ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಏನೂ ಕೆಲಸ ಮಾಡಿಲ್ಲ. ರಾಜಕೀಯ ಜನ್ಮ ಪಡೆದು ಜಿಲ್ಲೆಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

RELATED TOPICS:
English summary :Ashwath Narayan: I condemn the Congress protest

ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಭಾಷೆಗಳ ಆಧಾರದ ಮೇಲೆ ವಿವಾದಗಳನ್ನು ಹುಟ್ಟುಹಾಕಲು ಪ್ರಯತ್ನಿಸಲಾಗುತ್ತಿದೆ - ಪ್ರಧಾನಿ ಮೋದಿ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಉಗ್ರ ಯಾಸಿನ್ ಮಲಿಕ್ ದೋಷಿ ಎಂದು ಘೋಷಿಸಿದ ಎನ್‌ಐಎ ನ್ಯಾಯಾಲಯ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಮರಳಿ ರಾಜ್ಯ ರಾಜಕಾರಣಕ್ಕೆ? ಶೋಭಾ ಕರಂದ್ಲಾಜೆ ಸ್ಪಷ್ಟನೆ
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ಬರೀ ಫೋಟೋ ತೆಗೆಸಿಕೊಳ್ಳೋಕೆ ಸಿಟಿ ರೌಂಡ್ಸ್ ಹಾಕಬೇಡಿ!
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
ನಾರಾಯಣಗುರು, ಭಗತ್​ಸಿಂಗ್ ಪಾಠ ಕೈಬಿಟ್ಟಿಲ್ಲ, ಹೆಡಗೇವಾರ್ ಅವರ ವಿಚಾರವನ್ನು ಪಠ್ಯದಲ್ಲಿ ಸೇರಿಸಿರುವುದರಲ್ಲಿ ತಪ್ಪೇನಿದೆ?
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
1600 ಕೋಟಿ ರೂ.ಗಳ ವೆಚ್ಚದಲ್ಲಿ ಮಳೆ ನೀರು ಕಾಲುವೆಗಳ ಆಧುನೀಕರಣ
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಭಯೋತ್ಪಾದಕ ದಾಳಿಯ ಪ್ರಕರಣ : 5 ಬಂಧನ, ಭಾರಿ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಕಾಶ್ಮೀರ ಪೊಲೀಸರು
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ,ಉದ್ಯೋಗಗಳನ್ನು ಸೃಷ್ಟಿಸುತ್ತದೆಯೇ?
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ತಿಳಿಗೇಡಿ ಯುವಕನಿಂದ ಪಠ್ಯಪರಿಷ್ಕರಣೆ; ಪಠ್ಯಪುಸ್ತಕ ಮುದ್ರಣ ತಕ್ಷಣ ತಡೆಹಿಡಿಯಬೇಕು
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬೆಂಗಳೂರು ಮಳೆ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಯುವತಿಯರನ್ನು ಲೈಂಗಿಕವಾಗಿ ಬಳಸಿ ನಂತರ ಬ್ಲ್ಯಾಕ್ ಮೇಲ್!
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ
ಗೃಹ ಸಚಿವ ಅಗರ ಜ್ಞಾನೇಂದ್ರರನ್ನು ಭೇಟಿ ಮಾಡಿದ ನೂತನ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ನ್ಯೂಸ್ MORE NEWS...