Tue,May14,2024
ಕನ್ನಡ / English

ಸ್ನೇಹಿತನನ್ನ ಹತ್ಯೆ ಮಾಡಿ ಶವವನ್ನು ಭತ್ತದ ಬಣವೆಯಲ್ಲಿಟ್ಟು ಸುಟ್ಟಿ ಹಾಕಿದ್ದ ಆರೋಪಿ ಬಂಧನ! | ಜನತಾ ನ್ಯೂಸ್

06 Mar 2022
1577

ಬೆಳಗಾವಿ : ಪತ್ನಿ ಜೊತೆಗಿನ ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಹತ್ಯೆ ಮಾಡಿ ಶವವನ್ನು ಭತ್ತದ ಬಣವೆಯಲ್ಲಿಟ್ಟು ಸುಟ್ಟಿ ಹಾಕಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ತಾಲೂಕಿನ ಕಣಬರಗಿ ನಿವಾಸಿಯಾಗಿದ್ದ ಪರಶುರಾಮ ಕುರುಬರ ಬಂಧಿತ ಆರೋಪಿ. ಕೊಲ್ಹಾಪುರ ಜಿಲ್ಲೆಯ ಚಂದಗಡದ ಸಂತೋಷ ನಾರಾಯಣ ಪರೀಟ್ (36) ಕೊಲೆಯಾದ ವ್ಯಕ್ತಿ.

ಸಂತೋಷನ ಪತ್ನಿಯೊಂದಿಗೆ ಸ್ನೇಹಿತ ಪರಶುರಾಮ ಕುರುಬರ ಅಕ್ರಮ ಸಂಬಂಧ ಹೊಂದಿದ್ದ. ಅಲ್ಲದೇ ಪರಶುರಾಮ, ಸ್ನೇಹಿತನ ಪತ್ನಿ ರೂಪಾಳನ್ನು ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ ಎನ್ನಲಾಗಿದೆ.

ಸಂತೋಷ್ ಮಾ.1ರಂದು ಪತಿಯು ರೂಪಾಳನ್ನು ಭೇಟಿ ಮಾಡುವ ಉದ್ದೇಶದಿಂದ ಕಣಬರಗಿ ಬಂದಿದ್ದಾನೆ. ಈ ವೇಳೆ ಆರೋಪಿ ಪರಶುರಾಮ ಕುರುಬರ ಕಣರ್ಗಿ ಬಸ್ ತಂಗುದಾಣದಲ್ಲಿ ಸಂತೋಷ್‍ನನ್ನು ನೋಡಿ ತಕ್ಷಣ ಆತನನ್ನು ದ್ವಿಚಕ್ರ ವಾಹನ ಮೇಲೆ ಕೂರಿಸಿಕೊಂಡಿದ್ದಾನೆ.

ನಂತರ ಸುರಭಿ ಕ್ರಾಸ್ ಬಳಿ ಇರುವ ನ್ಯೂ ರೇಣುಕಾ ನಗರ ಹತ್ತಿರವಿದ್ದ ವಂಟಮೂರಿ ಕಾಲೋನಿಯ ಯಲ್ಲಪ್ಪ ಬುಡುಗ ಎಂಬವರ ಕೃಷಿ ಜಮೀನಿಗೆ ಕರೆದುಕೊಂಡು ಹೋಗಿ ಕಂಠ ಪೂರ್ತಿ ಕುಡಿಸಿದ್ದಾನೆ.

ನಶೆಯಲ್ಲಿ ಆರೋಪಿ ಪರಶುರಾಮ ತನ್ನ ಬಳಿಯಿದ್ದ ಟವೆಲ್‍ನಿಂದ ಸಂತೋಷನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಹತ್ಯೆ ಮಾಡಿದ ಬಳಿಕ ಅಲ್ಲೇ ಇದ್ದ ಭತ್ತದ ಬಣವೆಯಲ್ಲಿ ಶವವನ್ನ ಇಟ್ಟು ಬೆಂಕಿ ಹಚ್ಚಿ ಪರಾರಿಯಾಗಿದ್ದ ಎನ್ನಲಾಗಿದೆ.

ಜಮೀನಿನ ಮಾಲೀಕ ಯಲ್ಲಪ್ಪಾ ಅರೆಬೆಂದ ದೇಹವನ್ನು ನೋಡಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಘಟನೆ ನಡೆದ ನಾಲ್ಕೇ ದಿನಗಳಲ್ಲಿ ಆರೋಪಿಯನ್ನು ಬೈಕ್​ ಸಮೇತವಾಗಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.

RELATED TOPICS:
English summary :Man arrested for murdering his friend in Belagavi

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ನ್ಯೂಸ್ MORE NEWS...